ತಮಿಳಿನ ಖ್ಯಾತ ನಟ ವಿಜಯ್ ಆಂಟನಿಗೆ ಚಿತ್ರೀಕರಣ ವೇಳೆ ದೋಣಿಯೊಂದರಲ್ಲಿ ಅಪಘಾತವಾಗಿದ್ದು ಆರೋಗ್ಯ ಸ್ಥಿತಿ ಚಿಂತಾಜನಕ ಎಂದು ಹೇಳಲಾಗುತ್ತಿದೆ. ಮಲೇಷ್ಯಾದಲ್ಲಿ ವಿಜಯ್ ನಟನೆಯ ‘ಪಿಚ್ಚೈಕಾರನ್ 2’ ಸಿನಿಮಾ ಶೂಟಿಂಗ್ ನಡೆಯುತ್ತಿತ್ತು. ದೋಣಿಯೊಂದರಲ್ಲಿ ನಡೆಯುತ್ತಿದ್ದ ಸಾಹಸ ಸನ್ನಿವೇಶದ ದೃಶ್ಯದಲ್ಲಿ ದೋಣಿ ಅಪಘಾತಕ್ಕೀಡಾಗಿದೆ ಎಂದು ಹೇಳಲಾಗುತ್ತಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಚಿತ್ರೀಕರಣದಲ್ಲಿ ಭಾಗಿಯಾಗಿದ್ದವರ ಹೇಳಿಕೆಯ ಪ್ರಕಾರ, ‘ಸಮುದ್ರ ಮಧ್ಯ ದೋಣಿಯಲ್ಲಿ ಚಿತ್ರೀಕರಣ ಮಾಡಲಾಗುತ್ತಿತ್ತು. ಒಂದು ದೋಣಿ ಮತ್ತೊಂದು ದೋಣಿಯನ್ನು ಅಟ್ಟಿಸಿಕೊಂಡು ಬರುವ ದೃಶ್ಯ ಅದಾಗಿತ್ತು. ರಭಸವಾಗಿ ದೋಣಿಗಳು ಬರುವ ವೇಳೆಯಲ್ಲಿ ಒಂದು ದೋಣಿ ನಿಯಂತ್ರಣ ತಪ್ಪಿ ಮತ್ತೊಂದು ದೋಣಿಗೆ ಢಿಕ್ಕಿ ಹೊಡೆದಿದೆ. ಈ ವೇಳೆ ವಿಜಯ್ ಆಂಟನಿ ತೀವ್ರವಾಗಿ ಗಾಯಗೊಂಡಿದ್ದಾರೆ.
ಮಲೇಷ್ಯಾದ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ವಿಜಯ್ ಕುಟುಂಬ ಮಲೇಷ್ಯಾಗೆ ಪ್ರಯಾಣ ಬೆಳೆಸಿದೆ. ಅಲ್ಲದೇ, ಅವರನ್ನು ಚೆನ್ನೈಗೆ ಕರೆತರುವ ಕುರಿತು ಪತ್ನಿ ಫಾತಿಮಾ ಹೇಳಿಕೆ ನೀಡಿದ್ದಾರೆ. ಸ್ಥಿತಿ ಚಿಂತಾಜನಕವಾಗಿದ್ದು, ಕುಟುಂಬ ಆತಂಕದಲ್ಲಿದೆ. ವಿಜಯ್ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
ಅಪಘಾತದ ರಭಸಕ್ಕೆ ವಿಜಯ್ ಅವರ ಹಲ್ಲು ಮತ್ತು ದವಡೆಗೆ ತೀವ್ರತರಹದ ಪೆಟ್ಟು ಬಿದ್ದಿದೆ. ಮೂಳೆಗಳು ಮುರಿದಿವೆ ಎಂದು ಹೇಳಲಾಗುತ್ತಿದೆ. ನಿನ್ನೆಯಿಂದಲೇ ಅವರು ಪ್ರಜ್ಞಾಹೀನರಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಪಿಚ್ಚೈಕಾರನ್ 2 ಸಿನಿಮಾವನ್ನು ಬೇಸಿಗೆಯಲ್ಲಿ ಬಿಡುಗಡೆ ಮಾಡುವುದಾಗಿ ಮೊನ್ನೆಯಷ್ಟೇ ಘೋಷಿಸಿ ಅವರು ಚಿತ್ರೀಕರಣದಲ್ಲಿ ತೊಡಗಿದ್ದರು.
Join our Whatsapp group by clicking the below link 👇👇
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…