ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿಯನ್ನು ದೆಹಲಿ ನ್ಯಾಯಾಲಯ ನವೆಂಬರ್ 27ರವರೆಗೆ ವಿಸ್ತರಿಸಿದೆ.
ಐಎನ್ಎಕ್ಸ್ ಮಾಧ್ಯಮ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದ ಮೇರೆಗೆ ಸಿಬಿಐ, ಕಳೆದ ಆಗಸ್ಟ್ 21 ರಂದು ಚಿದಂಬರಂ ಅವರನ್ನು ಬಂಧಿಸಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ 2017 ರಲ್ಲಿ ಎಫ್ ಐ ಆರ್ ದಾಖಲು ಮಾಡಿತ್ತು. ಇದೀಗ ಪಿ ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿಯನ್ನು ದೆಹಲಿ ನ್ಯಾಯಾಲಯ ನವೆಂಬರ್ 27ರವರೆಗೆ ವಿಸ್ತರಿಸಿದೆ.
ದೆಹಲಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ಈ ಆದೇಶ ಹೊರಡಿಸಿದ್ದಾರೆ. ಕಸ್ಟಡಿ ಅವಧಿಯನ್ನು ವಿಸ್ತರಣೆ ಮಾಡಬೇಕೆಂದು ಜಾರಿ ನಿರ್ದೇಶನಾಲಯ ಮಾಡಿಕೊಂಡಿದ್ದ ಮನವಿಗೆ ನ್ಯಾಯಾಲಯ ಸಮ್ಮತಿ ನೀಡಿ, ಚಿದಂಬರಂ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಇದೇ 27ರ ವರೆಗೆ ವಿಸ್ತರಿಸಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…