Featured

ಚಿದಂಬರಂ ಬಂಧನ ಪ್ರಕರಣ : ಕಳೆದ 2 ದಿನಗಳಲ್ಲಿ ಭಾರತ ಹಿಂದೆಂದೂ ಕಾಣದ ರೀತಿಯಲ್ಲಿ ದೊಡ್ಡ ಮಟ್ಟದ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ : ರಣದೀಪ್ ಸುರ್ಜೆವಾಲಾ -Vishwanews24

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಡಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಪಿ ಚಿದಂಬರಂ ಅವರ ಸಿಬಿಐ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ. ತನ್ನ ವೈಯುಕ್ತಿಕ ಸೇಡಿಗಾಗಿ ಕೇಂದ್ರೀಯ ತನಿಖಾ ಸಂಸ್ಥೆಗಳಾದ ಸಿಬಿಐ ಮತ್ತು ಇಡಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು  ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಈ ಕುರಿತಂತೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಅವರು, ಕಳೆದ 2 ದಿನಗಳಲ್ಲಿ ಭಾರತ ಹಿಂದೆಂದೂ ಕಾಣದ ರೀತಿಯಲ್ಲಿ ದೊಡ್ಡ ಮಟ್ಟದ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದ ಇತರೆ ಆರೋಪಿಗಳಾರು ಬಂಧನಕ್ಕೀಡಾಗಿಲ್ಲ. ಆದರೆ ಕಾಂಗ್ರೆಸ್ ನ ಹಿರಿಯ ಮುಖಂಡರಾದ ಪಿ ಚಿದಂಬರಂರನ್ನು ಏಕಪಕ್ಷೀಯವಾಗಿ ಬಂಧಿಸಲಾಗಿದೆ. ಇದಕ್ಕೆ ಯಾವುದೇ ರೀತಿಯ ಕಾನೂನು ಹಿನ್ನಲೆ ಕೂಡ ಇಲ್ಲ ಎಂದು ಕಿಡಿಕಾರಿದ್ದಾರೆ.

ಜಾಹಿರಾತು

ಅಂತೆಯೇ, ದೇಶದ ಪ್ರಮುಖ ತನಿಖಾ ಸಂಸ್ಥೆಗಳಾದ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಬಿಜೆಪಿ ಸರ್ಕಾರದ ವೈಯುಕ್ತಿಕ ಸೇಡು ತೀರಿಸಿಕೊಳ್ಳುವ ಇಲಾಖೆಗಳಾಗಿ ಮಾರ್ಪಟ್ಟಿವೆ. ತನ್ನ ಸ್ವಂತ ಮಗಳನ್ನೇ ಕೊಲೆ ಮಾಡಿದ ಆರೋಪ ಎದುರಿಸುತ್ತಿರುವ ಓರ್ವ ಮಹಿಳೆಯ ಹೇಳಿಕೆಯ ಆಧಾರದ ಮೇರೆಗೇ ದೇಶದ ಓರ್ವ ಹಿರಿಯ ರಾಜಕಾರಣಿ, ಮಾಜಿ ಕೇಂದ್ರ ಸಚಿವರನ್ನು ಬಂಧಿಸಲಾಗಿದೆ. ಆದರೆ ಆರೋಪ ಮಾಡಿರುವ ಮಹಿಳೆಯ ಆರೋಪಗಳೆಲ್ಲವೂ ಸತ್ಯಕ್ಕೆ ದೂರವಾದದ್ದು ಎಂದು ಸುರ್ಜೆವಾಲಾ ಹೇಳಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago