ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಡಿಸಲು ಅನುಮತಿ ನಿರಾಕರಿಸಿದ ಸರ್ಕಾರದ ಕ್ರಮವನ್ನ ಗೃಹ ಸಚಿವ ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನ್ಯಾ.ಕುನ್ಹಾ ವರದಿಯ ಯಾವ ಶಿಫಾರಸ್ಸನ್ನೂ ಕೆಎಸ್‌ಸಿಎನವರು ಅಳವಡಿಕೆ ಮಾಡಿರಲಿಲ್ಲ. ಹೀಗಾಗಿ ಉನ್ನತ ಮಟ್ಟದ ಸಮಿತಿಯಿಂದ ಅನುಮತಿ ನಿರಾಕರಿಸಲಾಯ್ತು ಎಂದಿದ್ದಾರೆ.
ಕಾಲ್ತುಳಿತ ಘಟನೆ ಆದ ಮೇಲೆ ನ್ಯಾ.ಕುನ್ಹಾ ನೇತೃತ್ವದಲ್ಲಿ ಆಯೋಗ ರಚಿಸಿಲಾಗಿತ್ತು. ಅವರು ಕೊಟ್ಟ 17 ಶಿಫಾರಸ್ಸುಗಳನ್ನು ಕೆಎಸ್‌ಸಿಎ ಅವರಿಗೆ ನೀಡಿದ್ದೆವು, ಅದಕ್ಕೆ ಅವರು ಸ್ಪಂದಿಸಬೇಕಿತ್ತು. ಆದರೆ ಅವರು ಇದುವರೆಗೂ ಏನೂ ಮಾಡಿದಂತೆ ಕಂಡುಬಂದಿಲ್ಲ. ಎಲ್ಲ ಇಲಾಖೆಗಳ ಹಿರಿಯ ಅಧಿಕಾರಿಗಳಿರೋ ಸಮಿತಿಯವರು ಸ್ಥಳಕ್ಕೆ ಭೇಟಿ ಕೊಟ್ಟಿದ್ದರು. ಒಂದೂ ಶಿಫಾರಸ್ಸು ಕೂಡಾ ಅಲ್ಲಿ ಪೂರ್ತಿ ಮಾಡಿರಲಿಲ್ಲ. ಹಾಗಾಗಿ ಅನುಮತಿ ಕೊಡಲು ಸಾಧ್ಯವಾಗಿಲ್ಲ ಅಂತ ಸಮಿತಿ ನಿರ್ಧಾರ ಕೈಗೊಂಡಿದೆ. ನ್ಯಾ.ಕುನ್ಹಾ ಶಿಫಾರಸ್ಸುಗಳಂತೆ ಅವರು ಕ್ರಮ ಕೈಗೊಂಡರೆ ಅನುಮತಿ ಸಿಗಲಿದೆ ಅಂತ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…