ಚಿರಂಜೀವಿ ಸರ್ಜಾ ಅಗಲಿ ಇಂದಿಗೆ ಎರಡು ವರ್ಷ ; ಕುಟುಂಬದ ಸದಸ್ಯರಿಂದ ವಿಶೇಷ ಪೂಜೆ -Vishwanews24
ಚಿರಂಜೀವಿ ಸರ್ಜಾ ಅಗಲಿ ಇಂದಿಗೆ ಎರಡು ವರ್ಷ ; ಕುಟುಂಬದ ಸದಸ್ಯರಿಂದ ವಿಶೇಷ ಪೂಜೆ
ಕನ್ನಡದ ಹೆಸರಾಂತ ನಟ ಚಿರಂಜೀವಿ ಸರ್ಜಾ ಅಗಲಿ ಇಂದಿಗೆ ಎರಡು ವರ್ಷ. ನೆಚ್ಚಿನ ನಟನ ಸಮಾಧಿಗೆ ಇಂದು ಅಭಿಮಾನಿಗಳು ಮತ್ತು ಕುಟುಂಬದ ಸದಸ್ಯರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸರ್ಜಾ ಕುಟುಂಬ ಮತ್ತು ಮೇಘನಾ ರಾಜ್ ಕುಟುಂಬ ಹಾಗೂ ಸ್ನೇಹಿತರು ಇಂದು ಫಾರ್ಮ್ ಹೌಸ್ ನಲ್ಲಿ ನಡೆದ ಪೂಜೆಯಲ್ಲಿ ಪಾಲ್ಗೊಂಡಿದ್ದರು.
ಚಿರು ಆಪ್ತರು ಇಂದು ಸೋಷಿಯಲ್ ಮೀಡಿಯಾಗಳಲ್ಲೂ ನೆಚ್ಚಿನ ಗೆಳೆಯನ ಅಗಲಿಕೆಯ ನೋವನ್ನು ಹಂಚಿಕೊಂಡಿದ್ದಾರೆ. ಪನ್ನಗಾಭರಣ, ಸೃಜನ್ ಲೋಕೇಶ್ ಸೇರಿದಂತೆ ಹಲವರು ಚಿರು ಜೊತೆಗಿನ ಒಡನಾಟವನ್ನು ಹಂಚಿಕೊಂಡಿದ್ದಾರೆ.
