ಬೆಂಗಳೂರು: ನಟ ಚಿರಂಜೀವಿ ಸರ್ಜಾ ನಟನೆಯ ಕೊನೆಯ ಚಿತ್ರ ರಾಜಮಾರ್ತಾಂಡದ ಟ್ರೈಲರ್‌ನನ್ನು ಚಿರು ಮುದ್ದು ಮಗ ಜೂನಿಯರ್ ಚಿರು ಲಾಂಚ್ ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪುಟ್ಟದಾದ ಮುದ್ದು ಕೈಬೆರಳುಗಳಿಂದ ಅಪ್ಪನ ಸಿನಿಮಾದ ರಾಜಮಾರ್ತಾಂಡ ಸಿನಿಮಾದ ಟ್ರೈಲರ್‌ನ ವೀಡಿಯೋ ಪ್ಲೇ ಮಾಡುತ್ತಿರುವ ವೀಡಿಯೋವನ್ನು ಮೇಘನಾರಾಜ್ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಪೊಗರು ಸಿನಿಮಾ ಬಿಡುಗಡೆಯಾಗಿರುವ ದಿನವೇ ಚಿರು ಅಭಿನಯದ ರಾಜಮಾರ್ತಾಂಡ ಟ್ರೈಲರ್ ಮುದ್ದಾದ ಮಗನಿಂದ ಬಿಡುಗಡೆಯಾಗಿರುವುದು ವಿಶೇಷವಾಗಿದೆ.
ನಾನು ದೇವಾಲಯಗಳಿಗೆ ಹೋಗುವುದು ಕಡಿಮೆ, ಕಷ್ಟ ಕಾಲದಲ್ಲಿ ದೇವರು ಸ್ಪಂದಿಸುತ್ತಾನೆ : ಸಿದ್ದರಾಮಯ್ಯ -Vishwanews24
ರಾಜಾಮಾರ್ತಾಂಡ ಸಿನಿಮಾ ನಮ್ಮ ಕುಟುಂಬಕ್ಕೆ ತುಂಬಾ ಹತ್ತಿರವಾಗಿದೆ. ಚಿರು ಒಂದು ಪಾತ್ರವನ್ನು ಎಷ್ಟೊಂದು ಇಷ್ಟಪಟ್ಟು ಮಾಡುತ್ತಿದ್ದರು ಎನ್ನುವುದು ತಿಳಿದಿದೆ. ಈ ಸಿನಿಮಾವವನ್ನು ತಂಬಾ ಇಷ್ಟಪಟ್ಟು ಮಾಡಿದ್ದರು. ಈ ಸಿನಿಮಾ ಅವರ ಸಿನಿಮಾ ಜರ್ನಿಯಲ್ಲಿ ಅತ್ಯಂತ ವಿಶೇಷವಾಗಿದೆ. ಇಲ್ಲಿವರೆಗೂ ಮಾಡಿರುವ ಪಾತ್ರಗಳಿಗಿಂತ ಅತ್ಯಂತ ವಿಭಿನ್ನ ಮತ್ತು ವಿಶಿಷ್ಟವಾಗಿರುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಪ್ಪನಿಗೋಸ್ಕರ ಅಪ್ಪನಿಗಾಗಿ ಮತ್ತು ಸಿನಿಮಾತಂಡಕ್ಕಾಗಿ ಜೂನಿಯರ್ ಚಿರು ಟ್ರೈಲರ್ ಲಾಂಚ್ ಮಾಡುತ್ತಿದ್ದಾನೆ. ಈ ಸಿನಿಮಾ ತಂಡ ಕುಟುಂಬಕ್ಕೆ ಹತ್ತಿರವಾಗಿದೆ. ಚಿರು ನಟನೆ ಮಾಡಿದ್ದಾರೆ, ಧ್ರುವ ಸರ್ಜಾ ಧ್ವನಿಯನ್ನು ನೀಡಿದ್ದಾರೆ. ಮಗ ಟ್ರೈಲರ್ ಲಾಂಚ್ ಮಾಡಿದ್ದಾರೆ. ಸಿನಿಮಾಕ್ಕೆ ಶುಭಾಶಯಗಳು ಎಂದು ಹೇಳಿ ಮುದ್ದು ಮಗು ಟ್ರೈಲರ್ ರೀಲಿಸ್ ಮಾಡಿರುವ ವೀಡಿಯೋವನ್ನು ಹಂಚಿಕೊಂಡಿದ್ದಾರೆ.
ಫೆಬ್ರವರಿ 19ಕ್ಕೆ ರಾಜಮಾರ್ತಾಂಡ ಸಿನಿಮಾದ ಟ್ರೈಲರ್ ರಿಲೀಸ್ ಆಗುತ್ತದೆ. ಎಲ್ಲಾ ಅವನ ತಂದೆಗಾಗಿ. ಅಪ್ಪನ ಏಂಜಲ್, ರಾಜಮಾತಾರ್ಂಡ ಟ್ರೈಲರ್ ಅನ್ನು ನನ್ನ ಮಗ ನಾಳೆ ಬಿಡುಗಡೆ ಮಾಡಲಿದ್ದಾನೆ ಎಂದು ಮೇಘನಾ ರಾಜ್ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದರು ಅದರಂತೆ ಇದೀಗ ಟ್ರೈಲರ್ ಬಿಡುಗಡೆಯಾಗಿದೆ.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…