ಚಿಕ್ಕಮಗಳೂರು: ರಸ್ತೆ ಬದಿ ನಿಂತು ಚಿರತೆ ಚರ್ಮ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಸಂಚಾರಿ ಪೊಲೀಸರು ಬಂಧಿಸಿದ್ದಾರೆ.
ತಾಲೂಕಿನ ಇಂದಾವರ ಫ್ಯಾಕ್ಟರಿ ಬಡಾವಣೆಯ ಮಲ್ನಾಡ್ ಸಮುದಾಯ ಭವನದ ಬಳಿ ಬಂಧಿಸಲಾಗಿದೆ. ಬಂಧಿತರನ್ನು ಇಂದಾವರ ಗ್ರಾಮದ ಪರ್ವತ, ಎಪಿಎಂಸಿ ಮಾರ್ಕೆಟ್‍ನಲ್ಲಿ ರೈಟರ್ ಕೆಲಸ ಮಾಡುವ ಕಾಂತರಾಜ್ ಹಾಗೂ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಶ್ರೀನಿವಾಸ್ ಎಂದು ಗುರುತಿಸಲಾಗಿದೆ.
ಬಂಧಿತರು ಚಿರತೆ ಚರ್ಮವನ್ನು ಕಳೆದ ವರ್ಷವೇ ಮರಣ ಹೊಂದಿದ ಓರ್ವ ವ್ಯಕ್ತಿಯಿಂದ ಖರೀದಿಸಿದ್ದರು ಎಂದು ಹೇಳಲಾಗಿದೆ. ಅಂದಿನಿಂದಲೂ ಚಿರತೆ ಚರ್ಮವನ್ನು ಮಾರಾಟ ಮಾಡಲು ಗಿರಾಕಿಗಳಿಗಾಗಿ ಹುಡುಕಾಡುತ್ತಿದ್ದರು. ಆದರೆ, ಗಿರಾಕಿಗಳೂ ಯಾರೂ ಸಿಕ್ಕಿರಲಿಲ್ಲ. ಇದೀಗ, ರಸ್ತೆಬದಿಯಲ್ಲಿ ನಿಂತು ಗಿರಾಕಿಗಳಿಗಾಗಿ ಕಾಯುವಾಗ ಖಚಿತ ಮಾಹಿತಿ ಮೇರೆಗೆ ನಗರದ ಅರಣ್ಯ ಸಂಚಾರಿ ದಳದ ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ಈ ಕಾರ್ಯಾಚರಣೆಗೆ ಮಡಿಕೇರಿ ಅರಣ್ಯ ಘಟಕದ ಎಸ್ಪಿ ಚಂದ್ರಕಾಂತ್ ಮಾರ್ಗದರ್ಶನದಲ್ಲಿ ನಗರದ ಪೊಲೀಸ್ ಅರಣ್ಯ ಸಂಚಾರಿ ದಳದ ಸಬ್ಇನ್ಸ್‌ಪೆಕ್ಟರ್ ಶರತ್, ಸಿಬ್ಬಂದಿಗಳಾದ ಹೆಚ್.ದೇವರಾಜ್, ಡಿ.ಎಚ್.ದಿನೇಶ್, ಎಸ್.ಕೆ.ದಿವಾಕರ್, ಕೆ.ಎಸ್.ದಿಲೀಪ್, ಹಾಲೇಶ್, ಹೇಮಾವತಿ, ತಿಮ್ಮಶೆಟ್ಟಿಯವರು ಪಾಲ್ಗೊಂಡಿದ್ದರು. ಬಂಧಿತರಿಂದ ಚಿರತೆ ಚರ್ಮವನ್ನ ವಶಪಡಿಸಿಕೊಳ್ಳಲಾಗಿದೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…