ನವದೆಹಲಿ: ಚೀನಾದಲ್ಲಿ ಅಲ್ಲೋಲ ಕಲ್ಲೋಲಕ್ಕೆ ಕಾರಣಗಿರುವ ಕೊರೋನಾ ವೈರಸ್ ಭಾರತದಲ್ಲೂ ಆತಂಕ ಸೃಷ್ಟಿಸಿದೆ.ಮಾರಕ ವೈರಸ್ ಹಿನ್ನೆಲೆಯಲ್ಲಿ ದೇಶಾದ್ಯಂತ ಭಾರೀ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ.
ಇದೀಗ ದೆಹಲಿಯ ಡಾ. ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆ (ಆರ್‌ಎಂಎಲ್) ಸೇರಿರುವ ಮೂರು ಮಂದಿಗೆ ಶಂಕಿತ ಕರೋನ ವೈರಸ್ ಸೋಂಕು ತಗಲಿರುವುದು ಪತ್ತೆಯಾಗಿವೆ. ಮೂವರ ರಕ್ತದ ಮಾದರಿಗಳನ್ನು ಪರೀಕ್ಷೆಗಾಗಿ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರಕ್ಕೆ (ಎನ್‌ಸಿಡಿಸಿ) ಕಳುಹಿಸಲಾಗಿದೆ.ಭಾನುವಾರದವರೆಗೆ ದೇಶಕ್ಕೆ 137 ವಿಮಾನಗಳ ಮೂಲಕ 29707 ಪ್ರಯಾಣಿಕರು ಆಗಮಿಸಿದ್ದಾರೆ.
ಚೀನಾದಲ್ಲಿ ಕೊರೋನಾ ವೈರಸ್‌ಗೆ ಸಾವನ್ನಪ್ಪಿದವರ ಸಂಖ್ಯೆ 106 ಕ್ಕೆ ಏರಿಕೆಯಾಗಿದೆ. ಮಾತ್ರವಲ್ಲದೆ 1,300 ಹೊಸ ಪ್ರಕರಣಗಳು ಪತ್ತೆಯಾಗಿವೆ.
ಕೇರಳವೊಂದರಲ್ಲಿ 100 ಮಂದಿಯನ್ನು ನಿಗಾ ಸ್ಥಿತಿಯಲ್ಲಿ ಇರಿಸಲಾಗಿದೆ.
ಕೊರೋನಾ ವೈರಸ್ ಸೋಂಕು ಭಾರತಕ್ಕೂ ಕಾಲಿಡುವ ಭೀತಿ ಹಿನ್ನೆಲಯಲ್ಲಿ ದೇಶದಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದ. ಬೆಂಗಳೂರು ಸೇರಿ ದೇಶದ ವಿವಿಧೆಡೆ ಚೀನಾದಿಂದ ಬಂದ ಪ್ರಯಾಣಿಕರ ಮೇಲೆ ನಿಗಾ ಇಡಲಾಗಿದ್ದು, ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…