Featured

ಚೀನಾದ ಶೂ ರಾಜಧಾನಿ’ಯಲ್ಲಿ ಭಾರೀ ಅಗ್ನಿ ಅವಘಡ ; 28 ಮಂದಿ ಸಜೀವ ದಹನ – vishwanews24

ಚೀನಾದ ʻಶೂ ರಾಜಧಾನಿ’ಯಲ್ಲಿ ಭಾರೀ ಅಗ್ನಿ ಅವಘಡ ; 28 ಮಂದಿ ಸಜೀವ ದಹನ

ಬೀಜಿಂಗ್‌: ಶೂ ರಾಜಧಾನಿ ಎಂದೇ ಹೆಸರಾದ ಆಗ್ನೇಯ ಚೀನಾದ ಜಿಂಜಿಯಾಂಗ್‌ನ ಶೂ ಕಾರ್ಖಾನೆಯಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಿಂದ  28 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಅಗ್ನಿ ಅವಘಡದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಕಾರ್ಖಾನೆಯಿಂದ ಭಾರೀ ಪ್ರಮಾಣದ ಹೊಗೆ ಎದ್ದಿರುವುದು ದಾಖಲಾಗಿದೆ. ಅಲ್ಲದೇ ಛಾವಣಿ ಮೇಲೆ ಜನರು ಸಿಲುಕಿರುವುದು ಸೆರೆಯಾಗಿದೆ. ಈ ಅವಘಡದಲ್ಲಿ ಎಷ್ಟು ಮಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿಲ್ಲ.

ಇದನ್ನೂ ಓದಿ: 

ಬೆಂಕಿ ಹೊತ್ತಿಕೊಂಡಾಗ ಕಾರ್ಖಾನೆಯಲ್ಲಿ ಸುಮಾರು 240 ಜನರಿದ್ದರು. ಅದರಲ್ಲಿ ಹಲವರು ನಾಪತ್ತೆಯಾಗಿದ್ದಾರೆ. 200 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. ನೂರಾರು ರಕ್ಷಣಾ ಕಾರ್ಯಕರ್ತರು ಜನರ ರಕ್ಷಣೆಯಲ್ಲಿ ತೊಡಗಿದ್ದರು ಎಂದು ವರದಿಯಾಗಿದೆ.

ಕಾರ್ಖಾನೆಗೆ ಸಂಬಂಧಪಟ್ಟ ಕೆಲವು ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಂಪನಿಯ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ರಾಜ್ಯ ಮಾಧ್ಯಮ ವರದಿ ಮಾಡಿದೆ.

ಅವಘಡದ ಬಗ್ಗೆ ಪ್ರತಿಕ್ರಿಯಿಸಿರುವ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ನಿರ್ಲಕ್ಷ್ಯ ತೋರಿ ಈ ಸಾವುನೋವುಗಳಿಗೆ ಕಾರಣರಾದವರ ಮೇಲೆ ಕ್ರಮಕೈಗೊಳ್ಳಲಾಗುವುದು ಎಂದು ಗುಡುಗಿದ್ದಾರೆ. ಈ ವರ್ಷ ದೇಶದಲ್ಲಿ ಹಲವಾರು ಪ್ರಮುಖ ಕೈಗಾರಿಕೆಗಳಲ್ಲಿ ಅಪಘಾತಗಳು ಸಂಭವಿಸಿವೆ. ಇವುಗಳಿಂದ ಚೀನಾದ ಅಧಿಕಾರಿಗಳು ಸುರಕ್ಷತಾ ಕ್ರಮದ ಪಾಠ ಕಲಿಯಬೇಕು. ಕಠಿಣ ಮತ್ತು ಪರಿಣಾಮಕಾರಿ ಸುರಕ್ಷತಾ ಕ್ರಮಗಳನ್ನು ಜಾರಿಗೆ ತರಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: 

 

Vishwa News 24

Recent Posts

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

2 minutes ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

20 minutes ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

1 hour ago

ಪತಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ : ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪತ್ನಿ – vishwanews24

ಪತಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ : ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪತ್ನಿ ಹಾವೇರಿ: ಪತಿಗೆ ಬೇರೆ…

1 hour ago

ಬಡ್ಡಿ ದಂಧೆಕೋರರ ಕಿರುಕುಳ : ಸೆಲ್ಫಿ ವಿಡಿಯೋ ಮಾಡಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ – vishwanews24

ಬಡ್ಡಿ ದಂಧೆಕೋರರ ಕಿರುಕುಳ : ಸೆಲ್ಫಿ ವಿಡಿಯೋ ಮಾಡಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಗದಗ: ಬಡ್ಡಿ ದಂಧೆಕೋರರ ಕಿರುಕುಳಕ್ಕೆ…

1 hour ago

ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರಕ್ಕೆ ಆಕ್ಷೇಪ: ತುರ್ತು ಪರಿಶೀಲನೆಗಾಗಿ ಕೇಂದ್ರ ಗೃಹ ಸಚಿವರಿಗೆ ಶೋಭಾ ಕರಂದ್ಲಾಜೆ ಪತ್ರ – vishwanews24

ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರಕ್ಕೆ ಆಕ್ಷೇಪ: ತುರ್ತು ಪರಿಶೀಲನೆಗಾಗಿ ಕೇಂದ್ರ ಗೃಹ ಸಚಿವರಿಗೆ ಶೋಭಾ ಕರಂದ್ಲಾಜೆ ಪತ್ರ ಬೆಂಗಳೂರು: ಕರ್ನಾಟಕ…

2 hours ago