ನವದೆಹಲಿ: ಭಾರತದ ಮೊದಲ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಅವರ ನಿಧನದ ನಂತರ ಹೊಸ ಸಿಡಿಎಸ್ ನೇಮಕಗೊಳ್ಳ ಬೇಕಿದೆ. ಈಗಿರುವ ಮೂರು ಸೇನಾ ಮುಖ್ಯಸ್ಥರಲ್ಲಿ ಜನರಲ್ ಎಂಎಂ ನರಾವಣೆ ಅವರು ಚೀಫ್ ಆಫ್ ಸ್ಟಾಫ್ ಕಮಿಟಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಭಾರತೀಯ ಸೇನೆಯ ಮುಖ್ಯಸ್ಥ ಜನರಲ್ ಎಂಎಂ ನರಾವಣೆ ಅವರು ಹಿರಿಯ ಅಧಿಕಾರಿಯಾಗಿದ್ದು, ಸಿಡಿಎಸ್ ಕಚೇರಿ ಅಸ್ತಿತ್ವಕ್ಕೆ ಬರುವ ಮೊದಲು ಇದ್ದ ಸ್ಥಿತಿಯಂತೆ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಹೊಸ ಸಿಡಿಎಸ್ ನೇಮಕಗೊಳ್ಳುವವರೆಗೆ ಅಥವಾ ಸಿಡಿಎಸ್ ಅನುಪಸ್ಥಿತಿಯಲ್ಲಿ ಅತ್ಯಂತ ಹಿರಿಯ ಮುಖ್ಯಸ್ಥರು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವುದು ಕಾರ್ಯ ವಿಧಾನದ ಹಂತವಾಗಿದೆ.
ಡಿಸೆಂಬರ್ 8 ರಂದು ತಮಿಳುನಾಡಿನ ಕೂನೂರಿನಲ್ಲಿ ನಡೆದ ಹೆಲಿಕಾಫ್ಟರ್ ಅಪಘಾತದಲ್ಲಿ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್, ರಕ್ಷಣಾ ಬ್ರಿಗೇಡಿಯರ್ ಎಲ್ ಎಸ್ ಲಿಡ್ಡರ್, ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ ಮತ್ತು ಇತರ 10 ಮಂದಿ ಸಾವನ್ನಪ್ಪಿದ್ದರು. ಇದರ ಹಿನ್ನೆಲೆಯಲ್ಲಿ ಬದಲಾವಣೆಯನ್ನು ತರಲಾಗಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…