ಚುನಾವಣಾ ಪ್ರಚಾರಕ್ಕಾಗಿ ಮಂಗಳೂರಿಗೆ ಆಗಮಿಸಲಿದ್ದಾರೆ ಪ್ರಧಾನಿ ಮೋದಿ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು, : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ಅಬ್ಬರ ತಾರಕಕ್ಕೇರಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ ತಿಂಗಳಿನಲ್ಲಿ ಮಂಗಳೂರಿಗೆ ಆಗಮಿಸಿ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಬಿಜೆಪಿ ಜಿಲ್ಲೆಯಲ್ಲಿ ಏಪ್ರಿಲ್ 8 ರಿಂದ 14ರವರೆಗೆಬಿಜೆಪಿಯ ಚುನಾವಣಾ ಪ್ರಚಾರ ತಂತ್ರಗಾರಿಕೆ ಭಾಗವಾಗಿ ಗ್ರಾಮೀಣ ಸಂವಾದ ಮತ್ತು ನಗರ ಸಂವಾದ ಕಾರ್ಯಕ್ರಮ, ರೋಡ್ ಶೋ ಆಯೋಜಿಸಲಿದೆ.

ಕ್ಷೇತ್ರದಲ್ಲಿ ಒಟ್ಟು 55 ಸಾರ್ವಜನಿಕ ಸಭೆ ನಡೆಸಲು ಉದ್ದೇಶಿಸಲಾಗಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳೂರಿನಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡಲಿದ್ದಾರೆ. ಶೀಘ್ರದಲ್ಲೇ ಮೋದಿ ಅವರ ಕಾರ್ಯಕ್ರಮದ ದಿನಾಂಕ ನಿಗದಿಯಾಗಲಿದೆ.

ಮಾರ್ಚ್ 28ರಿಂದ 30ರವರೆಗೆ ಕ್ಷೇತ್ರದ ಬಿಜೆಪಿ ಪೇಜ್ ಪ್ರಮುಖರ ಸಮಾವೇಶ, ಏಪ್ರಿಲ್ 3ರಿಂದ 5ರವರೆಗೆ ಎಲ್ಲಾ ಬೂತ್‌ಗಳಲ್ಲಿ ಮನೆ ಸಂಪರ್ಕ ನಡೆಯಲಿದೆ. ಏಪ್ರಿಲ್ 7 ಮತ್ತು 14 ರಂದು ನಡೆಯುವ ಮಹಾ ಸಂಪರ್ಕ ಅಭಿಯಾನದ ಅಂಗವಾಗಿ ಬಿಜೆಪಿ ಕಾರ್ಯಕರ್ತರು ಒಂದೇ ದಿನದಲ್ಲಿ ಜಿಲ್ಲೆಯ ಎಲ್ಲಾ ಮನೆಗಳನ್ನು ಸಂಪರ್ಕಿಸಲು ಸಿದ್ಧತೆ ನಡೆಸಿದ್ದಾರೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನ ಸಭಾ ಕ್ಷೇತ್ರಗಳ 1861 ಬೂತ್‌ಗಳಲ್ಲಿ ಏಪ್ರಿಲ್ 7 ಮತ್ತು 14ರಂದು ಬಿಜೆಪಿ ಮಹಾ ಸಂಪರ್ಕ ಅಭಿಯಾನ ನಡೆಸಲಿದೆ. ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್, ಶಾಸಕರು ಸಹಿತ ಪಕ್ಷದ ಎಲ್ಲ ನಾಯಕರು ವಿವಿಧ ಬೂತ್‌ ಮಟ್ಟದಲ್ಲಿ ನಡೆಯುವ ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ.