ಮಂಗಳೂರು, : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ಅಬ್ಬರ ತಾರಕಕ್ಕೇರಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ ತಿಂಗಳಿನಲ್ಲಿ ಮಂಗಳೂರಿಗೆ ಆಗಮಿಸಿ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಬಿಜೆಪಿ ಜಿಲ್ಲೆಯಲ್ಲಿ ಏಪ್ರಿಲ್ 8 ರಿಂದ 14ರವರೆಗೆಬಿಜೆಪಿಯ ಚುನಾವಣಾ ಪ್ರಚಾರ ತಂತ್ರಗಾರಿಕೆ ಭಾಗವಾಗಿ ಗ್ರಾಮೀಣ ಸಂವಾದ ಮತ್ತು ನಗರ ಸಂವಾದ ಕಾರ್ಯಕ್ರಮ, ರೋಡ್ ಶೋ ಆಯೋಜಿಸಲಿದೆ.
ಕ್ಷೇತ್ರದಲ್ಲಿ ಒಟ್ಟು 55 ಸಾರ್ವಜನಿಕ ಸಭೆ ನಡೆಸಲು ಉದ್ದೇಶಿಸಲಾಗಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳೂರಿನಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡಲಿದ್ದಾರೆ. ಶೀಘ್ರದಲ್ಲೇ ಮೋದಿ ಅವರ ಕಾರ್ಯಕ್ರಮದ ದಿನಾಂಕ ನಿಗದಿಯಾಗಲಿದೆ.
ಮಾರ್ಚ್ 28ರಿಂದ 30ರವರೆಗೆ ಕ್ಷೇತ್ರದ ಬಿಜೆಪಿ ಪೇಜ್ ಪ್ರಮುಖರ ಸಮಾವೇಶ, ಏಪ್ರಿಲ್ 3ರಿಂದ 5ರವರೆಗೆ ಎಲ್ಲಾ ಬೂತ್‌ಗಳಲ್ಲಿ ಮನೆ ಸಂಪರ್ಕ ನಡೆಯಲಿದೆ. ಏಪ್ರಿಲ್ 7 ಮತ್ತು 14 ರಂದು ನಡೆಯುವ ಮಹಾ ಸಂಪರ್ಕ ಅಭಿಯಾನದ ಅಂಗವಾಗಿ ಬಿಜೆಪಿ ಕಾರ್ಯಕರ್ತರು ಒಂದೇ ದಿನದಲ್ಲಿ ಜಿಲ್ಲೆಯ ಎಲ್ಲಾ ಮನೆಗಳನ್ನು ಸಂಪರ್ಕಿಸಲು ಸಿದ್ಧತೆ ನಡೆಸಿದ್ದಾರೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನ ಸಭಾ ಕ್ಷೇತ್ರಗಳ 1861 ಬೂತ್‌ಗಳಲ್ಲಿ ಏಪ್ರಿಲ್ 7 ಮತ್ತು 14ರಂದು ಬಿಜೆಪಿ ಮಹಾ ಸಂಪರ್ಕ ಅಭಿಯಾನ ನಡೆಸಲಿದೆ. ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್, ಶಾಸಕರು ಸಹಿತ ಪಕ್ಷದ ಎಲ್ಲ ನಾಯಕರು ವಿವಿಧ ಬೂತ್ ಮಟ್ಟದಲ್ಲಿ ನಡೆಯುವ ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…