ಚುನಾವಣಾ ಪ್ರಚಾರಕ್ಕೆ ಉಡುಪಿಗೆ ಮೋದಿ ಬರುವ ನಿರೀಕ್ಷೆ : ದ್ವಿಗುಣಗೊಂಡ ಕಾರ್ಯಕರ್ತರ ಉತ್ಸಾಹ

Featured, ಉಡುಪಿ

ಉಡುಪಿ: ನರೇಂದ್ರ ಮೋದಿಯವರು ರಾಜ್ಯದಲ್ಲಿ ಎ.19ರಿಂದ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳುವ ಸಾಧ್ಯತೆ ಇದ್ದು 20 ವಿಧಾನಸಭಾ ಕ್ಷೇತ್ರಗಳಿಗೆ ಒಂದು ಸಭೆಯಂತೆ ಒಟ್ಟು 10ರಿಂದ 12 ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಅದರಂತೆ ಉಡುಪಿ, ಚಿಕ್ಕಮಗಳೂರು, ದ.ಕ. ಜಿಲ್ಲೆಗಳ ವಿವಿಧ ಕ್ಷೇತ್ರಗಳನ್ನೊಳಗೊಂಡ ಸಭೆ ಉಡುಪಿಯಲ್ಲಿ ನಡೆಯುವ ನಿರೀಕ್ಷೆ ಇದೆ.

ಅಮಿತ್‌ ಶಾ, ಯೋಗಿ ಆದಿತ್ಯನಾಥ್‌, ರಾಜ್‌ನಾಥ್‌ ಸಿಂಗ್‌, ಯಡಿಯೂರಪ್ಪ ಸೇರಿದಂತೆ ಅನೇಕ ಮುಖಂಡರು ಎ. 19ರ ಅನಂತರ ಉಡುಪಿಯಲ್ಲಿ ಪ್ರಚಾರ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಟ್ಟಾರು ರತ್ನಾಕರ ಹೆಗ್ಡೆ ತಿಳಿಸಿದ್ದಾರೆ.