Featured

ಚುನಾವಣಾ ರಾಜಕೀಯಕ್ಕೆ ಸಚಿವ ಕೆ.ಎನ್. ರಾಜಣ್ಣ ನಿವೃತ್ತಿ ಘೋಷಣೆ – vishwanews24

ಚುನಾವಣಾ ರಾಜಕೀಯಕ್ಕೆ ಸಚಿವ ಕೆ.ಎನ್. ರಾಜಣ್ಣ ನಿವೃತ್ತಿ ಘೋಷಣೆ

ಮೈಸೂರು: ಚುನಾವಣಾ ರಾಜಕೀಯಕ್ಕೆ ಸಹಕಾರ ಸಚಿವ ಕೆಎನ್‌ ರಾಜಣ್ಣ ನಿವೃತ್ತಿ ಹೇಳಿದ್ದಾರೆ.

ಹುಣಸೂರಿನಲ್ಲಿ ಮಾತನಾಡಿದ ಅವರು, ನನಗೆ 75 ವರ್ಷ ಆಯ್ತು, ಮುಂದೆ ಚುನಾವಣೆಗೆ  ಸ್ಪರ್ಧೆ ಮಾಡುವುದಿಲ್ಲ. ಆದರೆ ಸಹಕಾರಿ ಕ್ಷೇತ್ರ, ಸಕ್ರೀಯ ರಾಜಕಾರಣದಲ್ಲಿ ಇರುತ್ತೇನೆ ಎಂದು ತಿಳಿಸಿದರು.

ಪಟ್ಟಭದ್ರರ ಹಿಡಿತದಿಂದ ಸಹಕಾರ ಕ್ಷೇತ್ರ ಮುಕ್ತಕ್ಕೆ ಕ್ರಮ ಕೈಗೊಳ್ಳುತ್ತೇವೆ. ನಮ್ಮ ರಾಜ್ಯಕ್ಕೆ ಸಂಬಂಧಿಸಿದಂತೆ ಸಹಕಾರ ಕ್ಷೇತ್ರದ ಕಾಯ್ದೆಗೆ ತಿದ್ದುಪಡಿಗಾಗಿ ಕೇಂದ್ರಕ್ಕೆ ಕಳುಹಿಸುವ ಅವಶ್ಯಕತೆಯಿಲ್ಲ. ಈ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ ಎಂದರು.

ಜನರ ನಿರೀಕ್ಷೆಗೆ ತಕ್ಕಂತೆ ಎರಡೂ ಸದನಗಳ ಒಪ್ಪಿಗೆ ಪಡೆದು ತಿದ್ದುಪಡಿ ತಂದು ರಾಜ್ಯಪಾಲರ ಅಂಕಿತಕ್ಕೆ ಕಡತ ಕಳುಹಿಸಿದ್ದರೂ ಕೇಂದ್ರಕ್ಕೆ ಕಳುಹಿಸುವಂತೆ ಸೂಚಿಸಿದ್ದಾರೆ. ಆದರೆ ಈ ತಿದ್ದುಪಡಿ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವುದರಿಂದ ಕೇಂದ್ರಕ್ಕೆ ಕಳುಹಿಸುವ ಅವಶ್ಯವಿಲ್ಲ. ಈ ಬಗ್ಗೆ ಚರ್ಚಿಸಿ ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಎಂಡಿಸಿಸಿ ಸೇರಿದಂತೆ ಕೆಲ ಡೈರಿ ಚುನಾವಣೆಗಳನ್ನು ಮುಂದೂಡಲಾಗಿತ್ತು. ಅಲ್ಲದೇ ಮತಪಟ್ಟಿ ಸೇರಿದಂತೆ ಕೆಲ ತಾಂತ್ರಿಕ ಕಾರಣದಿಂದಾಗಿ ಚುನಾವಣೆ ಮುಂದೂಡಲಾಗಿದೆ. ಅದನ್ನು ಹೊರತು ಪಡಿಸಿ ಬೇರೆ ಯಾವುದೇ ಕಾರಣವಿಲ್ಲ. ಸಹಕಾರಿ ಸಂಸ್ಥೆಗಳಲ್ಲಿ ವಹಿವಾಟು, ಮಹಾಸಭೆ ಸೇರಿದಂತೆ ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕೇ ವಿನಾ: ಚುನಾವಣೆಯಲ್ಲಿ ಮತ ಹಾಕಲು ಸಹಕಾರ ಸಂಸ್ಥೆ ಸದಸ್ಯತ್ವ ಪಡೆಯುವುದಲ್ಲ. ಇದರಿಂದ ಆ ಸಂಘಗಳಿಗೆ ಹೊರೆಯಾಗಲಿದೆ. ಎಲ್ಲ ಸದಸ್ಯರು ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕೆಂಬುದು ಸರ್ಕಾರದ ಉದ್ದೇಶ. ಮುಂದೆ ಎಲ್ಲಾ ಚುನಾವಣೆಗಳನ್ನು ನಡೆಸಲಾಗುವುದು ಎಂದರು.

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

7 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

16 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

16 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

16 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

16 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago