ಬೆಂಗಳೂರು: ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿನ ಧ್ವನಿ ವರ್ಧಕಗಳಿಂದ ಯಾರಿಗೆ ತೊಂದರೆ ಆಗಿದೆ? ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ವರ್ಷ ಎಂದು ಧ್ವನಿ ವರ್ಧಕ ವಿಷಯದಲ್ಲಿ ಕ್ಯಾತೆ ತೆಗೆಯುತ್ತಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ. ಇವೆಲ್ಲ ಸಮಾಜದ ಶಾಂತಿ, ಸಾಮರಸ್ಯ ಹಾಳುಮಾಡುವ ಪ್ರಯತ್ನಗಳು ಎಂದು ಕಿಡಿಕಾರಿದ್ದಾರೆ.
ಇಂಥಾ ಘಟನೆಗಳಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಾಗಲ್ಲ. ರಾಜ್ಯಕ್ಕೆ ಯಾವ ಬಂಡವಾಳ ಹೂಡಿಕೆದಾರರು ಬರಲ್ಲ, ಉದ್ಯೋಗ ಸೃಷ್ಟಿಯಾಗಲ್ಲ, ನಿರುದ್ಯೋಗ ಸಮಸ್ಯೆ ಹೋಗಲ್ಲ, ರಾಜ್ಯದ ಜಿಡಿಪಿ ಬೆಳವಣಿಗೆಯಾಗಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.
ಈ ಎಲ್ಲ ಬೆಳವಣಿಗೆಗಳು ರಾಜ್ಯ ಸರಕಾರದ ಕುಮ್ಮಕ್ಕಿನಿಂದಲೇ ನಡೆಯುತ್ತಿವೆ. ಮುಖ್ಯಮಂತ್ರಿಗಳು ಮೌನವಾಗಿರುವುದಲ್ಲ, ಎಲ್ಲದಕ್ಕೂ ಕುಮ್ಮಕ್ಕು ನೀಡುತ್ತಿದ್ದಾರೆ. ಆರ್.ಎಸ್.ಎಸ್ ಮತ್ತು ಭಜರಂಗದಳ ಸರಕಾರಕ್ಕೆ ಗೊತ್ತಿಲ್ಲದೆ ಇಷ್ಟೆಲ್ಲಾ ಮಾಡುತ್ತಾ? ಇದನ್ನು ಸರಕಾರ ಹತ್ತಿಕ್ಕಬೇಕು, ಸಮಾಜದ ಶಾಂತಿ ಕದಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಿಎಂ ಆಗ್ರಹಿಸಿದರು.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…