Featured

ಚುನಾವಣಾ ಸಮರಕ್ಕೆ ಸಜ್ಜಾದ ಬಿಜೆಪಿ: ಬಿ ಎಸ್ ವೈ ನೇತೃತ್ವದಲ್ಲಿ ಇಂದಿನಿಂದ ರಾಜ್ಯ ಪ್ರವಾಸ

ಬೀದರ್​ : ಸ್ಥಳೀಯ ಸಂಸ್ಥೆಗಳ ಚುನಾವಣೆ ಜತೆಗೆ ಪ್ರಮುಖವಾಗಿ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲೇ ಬೇಕೆಂಬ ಪಣ ತೊಟ್ಟಿರುವ ಬಿಜೆಪಿ, ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಇಂದಿನಿಂದ ರಾಜ್ಯ ಪ್ರವಾಸ ಆರಂಭಿಸಲಿದೆ.

ವಿಧಾನಸಭಾ ಚುನಾವಣೆಯಲ್ಲಿ ದಣಿವರಿಯದಂತೆ ರಾಜ್ಯ ಪ್ರವಾಸ ಮಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್​ ಯಡಿಯೂರಪ್ಪ ಅತಿಹೆಚ್ಚಿನ ಸ್ಥಾನ ಗೆಲ್ಲುವಲ್ಲಿ ಸಫಲರಾದರೂ ಅಧಿಕಾರ ಚುಕ್ಕಾಣಿ ಅವರ ಕೈ ತಪ್ಪಿ ಹೋಗಿತ್ತು. ಈಗ ಆ ತಪ್ಪು ಮತ್ತೆ ಆಗದಂತೆ ಸಿದ್ಧವಾಗಿದ್ದು, ಇದಕ್ಕಾಗಿ ಭಾರೀ ಸಿದ್ಧತೆ ಮಾಡಿದ್ದಾರೆ.

ಲೋಕಸಭಾ ಹಾಗೂ ಸ್ಥಳೀಯ ಚುನಾವಣೆ ಘೋಷಣೆಯಾಗಿದ್ದು, ಇದರ ಮೇಲೆ ಕಣ್ಣಿಟ್ಟಿರುವ ಅವರು, ಈ ಬಾರಿ ಮಾತ್ರ ಬಹುಮತ ಗೆಲ್ಲಲ್ಲೇಬೇಕೆಂಬ ಹುಮ್ಮಸ್ಸಿನಲ್ಲಿದ್ದಾರೆ ಇದಕ್ಕಾಗಿ ಮತ್ತೆ ರಾಜ್ಯ ಪ್ರವಾಸಕ್ಕೆ ಸಿದ್ಧತೆ ನಡೆಸಿದ್ದು, ಇಂದಿನಿಂದ ತಮ್ಮ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಮೈತ್ರಿ ಸರ್ಕಾರದ ವಿರುದ್ಧ ಸಮರ ಸಾರಲು ಸಜ್ಜಾಗಿದ್ದಾರೆ.

ಪ್ರತ್ಯೇಕ ಉತ್ತರ ಕನ್ನಡ ಜಿಲ್ಲೆಯ ಕಾವು ಹೆಚ್ಚಿರುವ ಹಿನ್ನಲೆ ಇದರ ಲಾಭಾ ಪಡೆಯುವ ಉದ್ದೇಶದಿಂದಾಗಿ ಅವರು ಇಂದಿನಿಂದ ಬೀದರ್​ ಕ್ಷೇತ್ರದಿಂದಲೇ ತಮ್ಮ ರಾಜ್ಯ ಪ್ರವಾಸ ನಡೆಸಲಿದ್ದಾರೆ.

ರಾಜ್ಯ ಪ್ರವಾಸದ ಮೊದಲ ದಿನವಾದ ಇಂದು ಕಲ್ಯಾಣನಾಡು ಬೀದರ್ ನ ಪ್ರಸಿದ್ಧ ಶ್ರೀ ಪಾಪನಾಶಿನಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಶ್ರೀ ಬಿ.ಎಸ್.ಯಡಿಯೂರಪ್ಪನವರು ಹಾಗೂ ಜಿಲ್ಲೆಯ ನಾಯಕರ ನೇತೃತ್ವದಲ್ಲಿ ಭೇಟಿನೀಡಿ ವಿಶೇಷವಾಗಿ ಪೂಜೆ ಸಲ್ಲಿಸಿ ಪ್ರವಾಸ ಪ್ರಾರಂಭಿಸಲಾಯಿತು.ವಿಧಾನಸಭಾ ಚುನಾವಣೆಯಲ್ಲಾದ ತಪ್ಪುಗಳಿಂದ ಎಚ್ಚೆತ್ತುಕೊಂಡಿರುವ ಬಿಜೆಪಿ ನಾಯಕರು ಮತ್ತೆ ರಾಜ್ಯ ಪ್ರವಾಸ ಮಾಡುವ ಮೂಲಕ ಮತದಾರರ ಓಲೈಕೆಗೆ ಸಜ್ಜಾಗಿದ್ದಾರೆ.  ಈ ವೇಳೆ ಸಂಪೂರ್ಣ ಸಾಲಮನ್ನಾ, ಬಜೆಟ್ ನಿಂದ ಆಗಿರುವ​ ಅನ್ಯಾಯ, ಪ್ರತ್ಯೇಕ ಉತ್ತರ ಕರ್ನಾಟಕದ ಕೂಗು ಮೊದಲಾದ ವಿಷಯಗಳ ಕುರಿತು ಜನರಿಗೆ ಮನವರಿಕೆ ಮಾಡಿ, ಅದರ ಲಾಭ ಪಡೆಯಲು ಕಮಲ ಪಡೆ ನಿರ್ಧರಿಸಿದೆ.

 

Vishwa News 24

Recent Posts

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

10 minutes ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

15 minutes ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

3 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

4 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

4 hours ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

7 hours ago