ಲೋಕಸಭೆ ಚುನಾವಣೆಯಲ್ಲಿ ಲಾಭ ಪಡೆಯುವ ಕಾರಣಕ್ಕಾಗಿ ಮೋದಿ ಸರ್ಕಾರದಿಂದ ಮತ್ತೊಂದು ದಾಳಿ ನಡೆಯಲಿದೆ : ಮಮತಾ ಬ್ಯಾನರ್ಜಿ – Vishwanews24

Featured, ರಾಷ್ಟ್ರ ನ್ಯೂಸ್

ಕೋಲ್ಕತ್ತಾ: ಲೋಕಸಭೆ ಚುನಾವಣೆಯಲ್ಲಿ ಲಾಭ ಪಡೆಯುವ ಕಾರಣಕ್ಕಾಗಿ ನರೇಂದ್ರ ಮೋದಿ ಸರ್ಕಾರ ಮತ್ತೊಂದು ದಾಳಿ ನಡೆಸಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವ್ಯಂಗ್ಯವಾಡಿದ್ದಾರೆ.

ಏಪ್ರಿಲ್ ತಿಂಗಳಲ್ಲಿ ಮೋದಿ ಸರ್ಕಾರ ಮತ್ತೊಂದು ದಾಳಿ ನಡೆಸಲು ಯೋಜನೆ ರೂಪಿಸುತ್ತಿದ್ದಾರೆ ಎಂದು ನನಗೆ ಕೆಲ ಪತ್ರಕರ್ತರು ಮಾಹಿತಿ ನೀಡಿದ್ದಾರೆ. ಅದು ಯಾವ ದಾಳಿ ಎಂದು ನಾನು ಹೇಳುವುದಿಲ್ಲ. ಚುನಾವಣೆ ಕಾರಣದಿಂದ ಈ ದಾಳಿ ನಡೆಯಲಿದೆ. ಅದಕ್ಕಾಗಿ ಚುನಾವಣೆಯನ್ನು ಮೇ ೧೯ ರವರೆಗೆ ವಿಸ್ತರಿಸಿದ್ದಾರೆ ಎಂದು ಛೇಡಿಸಿದ್ದಾರೆ.

ಇನ್ನು ಉತ್ತರಪ್ರದೇಶ, ಬಿಹಾರ ಹಾಗೂ ಪಶ್ಚಿಮ ಬಂಗಾಳದಲ್ಲಿ 7 ಹಂತಗಳ ಚುನಾವಣೆ ನಡೆಯುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದರಿಂದ ಯಾವುದೇ ತೊಂದರೆ ಇಲ್ಲ. ಹೊಸ ಸರ್ಕಾರ ರಚನೆಗೆ ಈ ರಾಜ್ಯಗಳು ಪ್ರಧಾನ ಪಾತ್ರ ವಹಿಸುತ್ತವೆ ಎಂದರು.