ಬೆಂಗಳೂರು: ಚುನಾವಣೆಗೆ ಪ್ರಣಾಳಿಕೆಯಿಂದ ಶಕ್ತಿ ಯಾವತ್ತು ಬರಲ್ಲ. ಸರ್ಕಾರ ಇದ್ದಾಗ ಜನರ ಪರ ಕೆಲಸ ಮಾಡುವ ಅವಕಾಶ ಇತ್ತು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಕೇವಲ ಭಾವನೆ ಬಗ್ಗೆ ಮಾತನಾಡಿದ್ದರು. ಬದುಕಿನ ಬಗ್ಗೆ ಚಿಂತನೆ ಮಾಡಲಿಲ್ಲ. ಹಾಗಾಗಿ, ಅವರ ಪ್ರಣಾಳಿಕೆ ಅನುಷ್ಠಾನಕ್ಕೆ ಬರಲು ಸಾಧ್ಯವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸೋಮವಾರ ಹೇಳಿದರು.
ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಬಿಜೆಪಿ ಕಪ್ಪು ಹಣ ವಾಪಸ್ ತರುವುದಾಗಿ, ಉದ್ಯೋಗ ಸೃಷ್ಟಿಸುವ ಹಾಗೂ ರೈತರ ಆದಾಯ ದ್ವಿಗುಣಗೊಳಿಸುವ ಭರವಸೆ ನೀಡಿತ್ತು. ಅದಾವುದೂ ಈಡೇರಲಿಲ್ಲ. ರೈತರ ಹಿತಾಸಕ್ತಿಗೆ ವಿರುದ್ಧವಾಗಿ ಮೂರು ಕೃಷಿ ಮಸೂದೆಗಳನ್ನು ಜಾರಿಗೆ ತಂದಿದ್ದರು. ಅದರ ಕಾರ್ಯಸೂಚಿ ಹಿನ್ನಡೆಯಾದಾಗ ಕಾಯ್ದೆಗಳನ್ನು ಹಿಂಪಡೆದರು. ಈ ಹಿಂದಿನ ಭರವಸೆಗಳನ್ನೇ ಈಡೇರಿಸದಿರುವಾಗ ಹೊಸ ಭರವಸೆಗಳನ್ನು ಹೇಗೆ ಈಡೇರಿಸುತ್ತಾರೆ? ಎಂದು ಪ್ರಶ್ನಿಸಿದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಾಂಕ್ರಾಮಿಕ ರೋಗ ಸಮಯದಲ್ಲಿ ಜನರನ್ನು ಉಳಿಸಲು 20 ಲಕ್ಷ ಕೋಟಿ ರೂಪಾಯಿ ಖರ್ಚು ಮಾಡಿರುವುದಾಗಿ ಹೇಳಿಕೊಂಡಿದ್ದಾರೆ. ಇದೀಗ ಅವರು ಪತ್ರಿಕೆಗಳಲ್ಲಿ ಜಾಹೀರಾತುಗಳ ಮೂಲಕ ವೆಚ್ಚದ ವಿವರಗಳನ್ನು ಬಹಿರಂಗಪಡಿಸಬೇಕು. ಕೋವಿಡ್ -19 ನಿಂದ ಸಾವನ್ನಪ್ಪಿದ ಕೇಂದ್ರ ಸಚಿವ ದಿವಂಗತ ಸುರೇಶ್ ಅಂಗಡಿ ಅವರ ಪಾರ್ಥಿವ ಶರೀರವನ್ನು ಹಸ್ತಾಂತರಿಸಲು ಬಿಜೆಪಿ ಸರ್ಕಾರ ನಿರಾಕರಿಸಿತ್ತು. ಜಗದೀಶ್ ಶೆಟ್ಟರ್ ಮತ್ತು ಇತರ ಬಿಜೆಪಿ ಸಂಸದರು ಪಾರ್ಥಿವ ಶರೀರವನ್ನು ಸ್ವಗ್ರಾಮಕ್ಕೆ ಹಿಂತಿರುಗಿಸುವಂತೆ ಮೋದಿಯವರಿಗೆ ಮನವಿ ಮಾಡಲಿಲ್ಲ, ಆದರೆ ಡಿ.ಕೆ.ಸುರೇಶ್ ಅವರು ದೆಹಲಿಯಲ್ಲಿ ಅಂತಿಮ ವಿಧಿವಿಧಾನದವರೆಗೂ ಜೊತೆಗೆ ನಿಂತಿದ್ದರು. ಬಿಜೆಪಿಗೆ ಅಧಿಕಾರ ಕಳೆದುಕೊಳ್ಳುವ ಭಯವಿದೆ. ಹೀಗಾಗಿ ಕೇಂದ್ರವು ಕರ್ನಾಟಕದ 14 ಕ್ಷೇತ್ರಗಳಲ್ಲಿ ಹೊಸ ಮುಖಗಳನ್ನು ಕಣಕ್ಕಿಳಿಸಿದೆ ಎಂದರು.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…