Featured

ಚುನಾವಣೆಗೆ  ಮುನ್ನ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ : ಅಮಿತ್‌ ಶಾ – Vishwanews24

ಚುನಾವಣೆಗೆ  ಮುನ್ನ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ : ಅಮಿತ್‌ ಶಾ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಲೋಕಸಭಾ ಚುನಾವಣೆಗೆ  ಮುನ್ನ ಜಾರಿಗೆ ತರುವುದಾಗಿ ಗೃಹ ಸಚಿವ ಅಮಿತ್‌ ಶಾ  ಹೇಳಿದ್ದಾರೆ.

ಖಾಸಗಿ ಮಾಧ್ಯಮವೊಂದರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿಎಎ ದೇಶದ ಕಾಯ್ದೆಯಾಗಿದೆ. ಅದನ್ನು ಖಂಡಿತವಾಗಿಯೂ ಲೋಕಸಭಾ ಚುನಾವಣೆಗೆ ಮುನ್ನವೇ ನೋಟಿಫೈ ಮಾಡಲಾಗುವುದು ಅದರಲ್ಲಿ ಯಾವುದೇ ಗೊಂದಲ ಇಲ್ಲ ಎಂದರು.

ಸಿಎಎ ಕಾಂಗ್ರೆಸ್ ಸರ್ಕಾರದ  ಭರವಸೆಯಾಗಿತ್ತು. ದೇಶ ವಿಭಜನೆಯಾದಾಗ ಮತ್ತು ಆ ದೇಶದಲ್ಲಿದ್ದ ಅಲ್ಪಸಂಖ್ಯಾತರು ಕಿರುಕುಳಕ್ಕೊಳಗಾದಾಗ, ನಿರಾಶ್ರಿತರಿಗೆ ಭಾರತದಲ್ಲಿ ಆಶ್ರಯ ನೀಡಿ ಭಾರತೀಯ ಪೌರತ್ವವನ್ನು ನೀಡಲಾಗುವುದು ಎಂದು ಕಾಂಗ್ರೆಸ್ ಭರವಸೆ ನೀಡಿತ್ತು. ಈಗ ಕಾಂಗ್ರೆಸ್‌ ಆ ಭರವಸೆಯಿಂದ ಹಿಂದಕ್ಕೆ ಸರಿಯುತ್ತಿದೆ ಎಂದು ಶಾ ದೂರಿದರು.

ನಮ್ಮ ದೇಶದಲ್ಲಿ ಅಲ್ಪಸಂಖ್ಯಾತರು ಮತ್ತು ವಿಶೇಷವಾಗಿ ನಮ್ಮ ಮುಸ್ಲಿಂ ಸಮುದಾಯವನ್ನು ಪ್ರಚೋದಿಸಲಾಗುತ್ತಿದೆ. ಕಾಯ್ದೆಯಲ್ಲಿ ಯಾವುದೇ ನಿಬಂಧನೆ ಇಲ್ಲದ ಕಾರಣ ಸಿಎಎ ಯಾರ ಪೌರತ್ವವನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ಸಿಎಎ ಬಾಂಗ್ಲಾದೇಶ ಮತ್ತು ಪಾಕಿಸ್ತಾನದಲ್ಲಿ ಕಿರುಕುಳಕ್ಕೊಳಗಾದ ನಿರಾಶ್ರಿತರಿಗೆ ಪೌರತ್ವ ನೀಡುವ ಕಾಯ್ದೆಯಾಗಿದೆ ಎಂದು ವಿವರಿಸಿದರು.

2019ರಲ್ಲಿ ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಗಳು ಸಹಿ ಹಾಕಿದ ನಂತರ ದೇಶದಲ್ಲಿ ಭಾರೀ ಪ್ರತಿಭಟನೆ ನಡೆದ ಪರಿಣಾಮ ಇನ್ನೂ ಸಿಎಎ ಜಾರಿಯಾಗಿಲ್ಲ.

ಈ ಕಾಯ್ದೆಯ ಪ್ರಕಾರ ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶಗಳಿಂದ ಬರುವ ಹಿಂದೂ, ಸಿಖ್, ಜೈನ್, ಕ್ರೈಸ್ತ ಮತ್ತು ಬೌದ್ಧ ಸಮುದಾಯದವರಿಗೆ ಭಾರತದ ಪೌರತ್ವ ನೀಡಲಾಗುತ್ತದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

7 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

8 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

8 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

8 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

9 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

9 hours ago