ಮಂಗಳೂರು, : ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಧಿಕಾರರೂಢ ಬಿಜೆಪಿಯಿಂದ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಳ್ಳುವ ಪ್ರಕ್ರಿಯೆ ವ್ಯಾಪಕವಾಗಿ ನಡೆಯುತ್ತಿದೆ. ಈ ಬಗ್ಗೆ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಚುನಾವಣೆಯಲ್ಲಿ ಜಯ ಗಳಿಸಲು ಬಿಜೆಪಿ ವಾಮ ಮಾರ್ಗವನ್ನು ಅನುಸರಿಸುತ್ತಿದೆ. ಹಣದ ಆಮಿಷ, ಅಭ್ಯರ್ಥಿಗಳನ್ನು ಕಣದಿಂದ ಹಿಂದೆ ಸರಿಯಲು ಬೆದರಿಕೆ ಒಡ್ಡಲಾಗುತ್ತಿದೆ. ಕೆಲವು ಪ್ರದೇಶದಲ್ಲಿ ಅವೈಜ್ಞಾನಿಕವಾಗಿ ವಾರ್ಡ್ ಗಳನ್ನು ವಿಂಗಡಿಸಲಾಗಿದೆ ಎಂದು ಹರೀಶ್ ಕುಮಾರ್ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಶಾಸಕ ಯು.ಟಿ. ಖಾದರ್, ಮಾಜಿ ಶಾಸಕ ಐವನ್ ಡಿಸೋಜ, ಕಾಂಗ್ರೆಸ್ ಪದಾಧಿಕಾರಿಗಳಾದ ವಿಶ್ವಾಸ್ ದಾಸ್, ಸದಾಶಿವ ಶೆಟ್ಟಿ, ಪ್ರಸಾದ್, ಶುಭೋದಯ ಆಳ್ವ ಮೊದಲಾದವರು ಉಪಸ್ಥಿತರಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…