Featured

ಚುನಾವಣೆಯಲ್ಲಿ ಮಹಾಘಟಬಂಧನ ಸೋಲಿನ ಬಳಿಕ ಅಖಿಲೇಶ್ ಅವರು ಒಂದು ಕರೆ ಕೂಡಾ ಮಾಡಿಲ್ಲ : ಮಾಯಾವತಿ -Vishwanews24

ಲಕ್ನೋ: ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಮೈತ್ರಿಕೂಟ ಉತ್ತರ ಪ್ರದೇಶದಲ್ಲಿ ಹೀನಾಯ ಸೋಲು ಅನುಭವಿಸಿ ಒಂದು ತಿಂಗಳ ಬಳಿಕ, ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ ತಮ್ಮ ಪಕ್ಷದ ಸಭೆಯಲ್ಲಿ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ವಿರುದ್ಧ ಕಿಡಿ ಕಾರಿದ್ದಾರೆ.

ರವಿವಾರ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಉಭಯ ಪಕ್ಷಗಳ ನಡುವಿನ ಹಳೆಯ ವೈಮನಸ್ಯವನ್ನು ಮತ್ತೆ ಕೆದಕಿದ ಮಾಯಾವತಿ, 17 ಕೋಟಿಯ ತಾಜ್ ಕಾರಿಡಾರ್ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ತಮ್ಮನ್ನು ಸಿಲುಕಿಸಲು ಪ್ರಯತ್ನಿಸಿದ್ದರು ಎಂದು ಆಪಾದಿಸಿದರು.

“ಚುನಾವಣೆಯಲ್ಲಿ ಮಹಾಘಟಬಂಧನ ಸೋಲಿನ ಬಳಿಕ ಅಖಿಲೇಶ್ ಅವರು ಒಂದು ಕರೆ ಕೂಡಾ ಮಾಡಿಲ್ಲ. ಬಿಎಸ್ಪಿ ಪ್ರಧಾನ ಕಾರ್ಯದರ್ಶಿ ಸತೀಶ್ ಮಿಶ್ರಾ ಅವರು ನನ್ನ ಜತೆ ಮಾತನಾಡುವಂತೆ ಅಖಿಲೇಶ್‌ಗೆ ಕೇಳಿಕೊಂಡಿದ್ದರು.

ಆದರೆ ಅದಕ್ಕೆ ಅವರು ಕಿವಿಗೊಡಲಿಲ್ಲ. ನಾನು ಅವರಿಗಿಂತ ಹಿರಿಯಳಾಗಿರುವುದರಿಂದ ನಾನೇ ಅವರಿಗೆ ಕರೆ ಮಾಡಿ ಅವರ ಕುಟುಂಬ ಸದಸ್ಯರು ಸೋತ ಬಗ್ಗೆ ಬೇಸರ ವ್ಯಕ್ತಪಡಿಸಿದ್ದೆ” ಎಂದು ವಿವರಿಸಿದರು.

ಈ ಮಹಾಮೈತ್ರಿಕೂಟ ಉತ್ತರ ಪ್ರದೇಶದಲ್ಲಿ ಬಿಜೆಪಿ ಪ್ರಾಬಲ್ಯಕ್ಕೆ ತಡೆ ಹಾಕುತ್ತದೆ ಎಂಬ ಭಾರೀ ನಿರೀಕ್ಷೆಯ ಹೊರತಾಗಿಯೂ 14 ಸ್ಥಾನಗಳನ್ನಷ್ಟೇ ಗೆಲ್ಲಲು ಸಾಧ್ಯವಾಗಿತ್ತು. ಬಿಜೆಪಿ 64 ಸ್ಥಾನಗಳಲ್ಲಿ ಜಯಭೇರಿ ಬಾರಿಸಿತ್ತು. ಫಲಿತಾಂಶ ಪ್ರಕಟವಾದ ತಕ್ಷಣವೇ ಮೈತ್ರಿಯಲ್ಲಿ ಬಿರುಕು ಕಾಣಿಸಿಕೊಂಡಿತ್ತು.

ಮುಸ್ಲಿಂ ಸಮುದಾಯದ ವಿರುದ್ಧ ಅಖಿಲೇಶ್ ಯಾದವ್ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದೂ ಬಿಎಸ್ಪಿ ನಾಯಕಿ ಆಪಾದಿಸಿದರು. “ನಾನು ಲೋಕಸಭಾ ಚುನಾವಣೆ ಟಿಕೆಟ್ ಹಂಚುತ್ತಿದ್ದಾಗ ಸತೀಶ್ ಮಿಶ್ರಾ ಅವರ ಮೂಲಕ ಅಖಿಲೇಶ್ ಸಂದೇಶ ರವಾನಿಸಿ, ಮತಗಳ ಧ್ರುವೀಕರಣ ತಡೆಯುವ ಸಲುವಾಗಿ ಮುಸ್ಲಿಮರಿಗೆ ಟಿಕೆಟ್ ನೀಡಬೇಡಿ ಎಂದು ಸಲಹೆ ಮಾಡಿದ್ದರು. ಆದರೆ ನಾನು ಅದಕ್ಕೆ ಒಪ್ಪಲಿಲ್ಲ” ಎಂದು ಮಾಯಾವತಿ ಹೇಳಿದರು.

ಅಖಿಲೇಶ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದಾಗ ಯಾದವೇತರ ಹಿಂದುಳಿದ ವರ್ಗಗಳಿಗೆ ವಿರುದ್ಧವಾಗಿ ಅವರು ನಡೆದುಕೊಂಡಿದ್ದರು. ಆದ್ದರಿಂದ ಜನ ನಮ್ಮ ಮೈತ್ರಿಕೂಟಕ್ಕೆ ಮತ ಹಾಕಲಿಲ್ಲ ಎಂದು ಆಪಾದಿಸಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

7 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago