ಉಡುಪಿ: ವಿಧಾನಸಭಾ ಚುನಾವಣೆಯ ಫಲಿತಾಂಶ ಘೋಷಣೆಯ ಬಳಿಕ ಜಯ ಗಳಿಸಿದ ಅಭ್ಯರ್ಥಿಯ ಪರವಾಗಿ ಪಟಾಕಿ ಸಿಡಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಆದೇಶ ನೀಡಿರುವ ಜಿಲ್ಲಾಧಿಕಾರಿಗಳು ಮೇ 15ರಂದು ಉಡುಪಿ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಯ ಕಾರ್ಯ ಮುಕ್ತಾಯದ ತರುವಾವಯ ಅಂತಿಮ ಫಲಿತಾಂಶ ಘೋಷಣೆಯ ಬಳಿಕ ಜಯಗಳಿಸಿದ ವಿಜಯಿ ಅಭ್ಯರ್ಥಿಗಳು ವಿಜಯೋತ್ಸವ ಆಚರಣೆ ಸಂದರ್ಭದಲ್ಲಿ ಪಟಾಕಿ ಸಿಡಿಸುವರಿದ್ದು, ಈ ಹಿಂದೆ ಪಟಾಕಿ ಸಿಡಿತದಿಂದ ಅಹಿತಕರ ಘಟನೆಗಳು ಸಂಭವಿಸಿದ್ದು, ವಿವಿಧ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿರುತ್ತವೆ. ಆದ್ದರಿಂದ ಚುನಾವಣೆಯ ವಿಜಯೋತ್ಸವ ಸಮಯದಲ್ಲಿ ಯಾವುದೇ ರೀತಿಯ ಪಟಾಕಿ ಸಿಡಿಸುವುದನ್ನು ತಡೆಗಟ್ಟುವುದರ ಸಲುವಾಗಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಮನವಿಯ ಮೇರೆಗೆ ಮೇ 15 ರ ಬೆಳಿಗ್ಗೆ 10ಗಂಟೆಯಿಂದ ಮೇ 17 ರ ಸಂಜೆ 5 ಗಂಟೆಯ ವರೆಗೆ ಉಡುಪಿ ಜಿಲ್ಲೆಯಾದ್ಯಂತ ಯಾವುದೇ ರೀತಿಯ ಪಟಾಕಿ ಮಾರಾಟ ಮಾಡುವುದನ್ನು ನೀಷೇಧಿಸಿದ್ದು, ಪಟಾಕಿ ಅಂಗಡಿ/ಮಳಿಗೆಗಳನ್ನು ಮುಚ್ಚಲು ಆದೇಶ ನೀಡಿರುತ್ತಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…