Featured

ಚುನಾವಣೆ ಫಲಿತಾಂಶ ಏನೇ ಬರಲಿ , ನಾಪತ್ತೆಯಾಗಿರುವ ಮೀನುಗಾರರನ್ನು ಪತ್ತೆ ಹಚ್ಚಲು ನ್ಯಾಯಾಲಯದ ಮೊರೆ ಹೋಗುವೆ : ಅಮೃತ್‌ ಶೆಣೈ -Vishwanews24

ಚಿಕ್ಕಮಗಳೂರು : ಚುನಾವಣೆ ಫಲಿತಾಂಶ ಏನೇ ಬರಲಿ ಮಲ್ಪೆಯಲ್ಲಿ ನಾಪತ್ತೆಯಾಗಿರುವ ಮೀನುಗಾರರನ್ನು ಪತ್ತೆ ಹಚ್ಚಿಕೊಡಿ ಎಂದು ನಾನು ನ್ಯಾಯಾಲಯದ ಮೊರೆ ಹೋಗುವುದಾಗಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅಮೃತ್‌ ಶೆಣೈ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆಧುನಿಕ ತಂತ್ರಜ್ಞಾನ ಇಷ್ಟೊಂದು ಮುಂದುವರಿದಿದ್ದರೂ ಇತ್ತೀಚೆಗೆ ಮಲ್ಪೆಯಲ್ಲಿ ನಾಪತ್ತೆಯಾದ ಸುವರ್ಣ ತ್ರಿಭುಜ ಬೋಟ್‌ ಮತ್ತು 7 ಮಂದಿ ಮೀನುಗಾರರನ್ನು 100 ದಿನ ಕಳೆದರೂ ಹುಡುಕದಿರುವುದು ದುರಾದೃಷ್ಟಕರ. ಈ ಬಗ್ಗೆ ನ್ಯಾಯಾಲಯದ ಮೆಟ್ಟಿಲೇರುವುದಾಗಿ ಅವರು ತಿಳಿಸಿದರು.

ತಾವು ಸಂಸದನಾಗಿ ಆಯ್ಕೆಯಾದಲ್ಲಿ ಉಡುಪಿ ಜಿಲ್ಲೆಯ ಮರಳಿನ ಸಮಸ್ಯೆ ಪರಿಹರಿಸುತ್ತೇನೆ. ಯುವ ಜನಾಂಗ ಎರಡೂ ಜಿಲ್ಲೆಯಲ್ಲಿ ಉದ್ಯೋಗ ಅರಸಿ ಗುಳೆ ಹೋಗುತ್ತಿದ್ದು ಊರುಗಳು ವೃದ್ಧಾಶ್ರಮಗಳಾಗುತ್ತಿವೆ. ಆಯಾ ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿ ಮಾಡುವ ಉದ್ದೇಶದಿಂದ ಸಾಫ್ಟ್‌ವೇರ್‌ ಪಾರ್ಕ್‌ ಮತ್ತಿತರೆ ಉದ್ದಿಮೆ ಸ್ಥಾಪಿಸಲಾಗುವುದು ಎಂದರು.

ದೇಶದಲ್ಲಿ ಕನಿಷ್ಠ ಸಾವಿರಾರು ರೂ. ಸಾಲ ತೀರಿಸಲಾಗದೆ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಆದರೆ, ಸಾವಿರಾರು ಕೋಟಿ ರೂ.ಸಾಲ ತೀರಿಸದೆ ಶ್ರೀಮಂತ ಉದ್ಯಮಿಗಳು ವಿದೇಶಕ್ಕೆ ಪಲಾಯನ ಮಾಡಿ ಅಲ್ಲಿ ನೆಮ್ಮದಿಯಾಗಿ ಬದುಕುತ್ತಿದ್ದಾರೆ. ಇದನ್ನು ಸರಿಪಡಿಸಲು ಪ್ರಾಮಾಣಿಕ ಪ್ರಯತ್ನ, ಅಡಕೆ ಮತ್ತು ಕಾಫಿ ಬೆಳೆ ಹಾಗೂ ಕುದುರೆಮುಖ ಕಾರ್ಮಿಕರ ಸಮಸ್ಯೆಗೆ ಪರಿಹಾರ ಕಂಡುಹಿಡಿಯಲಾಗುವುದು. ರಾಷ್ಟ್ರೀಯ ಹೆದ್ದಾರಿ, ಟೋಲ್‌ಗೇಟ್‌, ಸಿಆರ್‌ಜೆಡ್‌ ಬಗ್ಗೆ ಸಂಸತ್ತಿನಲ್ಲಿ ನ್ಯಾಯೋಚಿತ ಹೋರಾಟ ಮಾಡಲಾಗುವುದು. ಉಡುಪಿ ಮತ್ತು ಚಿಕ್ಕಮಗಳೂರು ಅದ್ಭುತ ಪ್ರವಾಸಿ ತಾಣಗಳಾಗಿದ್ದು ಅವುಗಳನ್ನು ವಿಶ್ವವಿಖ್ಯಾತ ಪ್ರವಾಸಿ ತಾಣಗಳನ್ನಾಗಿ ರೂಪಿಸುವ ಯೋಜನೆ ತಂದು ಜಿಲ್ಲೆಗಳ ಆರ್ಥಿಕ ಸ್ಥಿತಿ ಉತ್ತಮ ಪಡಿಸಲಾಗುವುದು ಎಂದು ಹೇಳಿದರು.

ಮುಖಂಡರಾದ ಅನಿತಾಡಿಸೋಜ, ಪ್ರಶಾಂತ್‌ ಕುಂದರ್‌, ಹನೀಫ್‌, ವರದರಾಜು ಹಾಜರಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago