Featured

ಚುನಾವಣೆ ವೇಳೆ ಜನರ ಮುಂದೆ ಇಟ್ಟಿದ್ದ ಭರವಸೆಗಳನ್ನು 2 ವರ್ಷಗಳಲ್ಲಿ ಪೂರೈಸಿದ್ದೇವೆ : ಸಿ.ಎಂ ಸಿದ್ದರಾಮಯ್ಯ – vishwanews24

111111 ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಿದ ಸಿಎಂ..

142 ಭರವಸೆಗಳನ್ನು ಪೂರೈಸಿದ್ದೇವೆ, ಉಳಿದವುಗಳು ಮುಂದಿನ 3 ವರ್ಷಗಳಲ್ಲಿ ಜಾರಿಗೆ..

ಬಿಜೆಪಿ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬಂದೇ ಇಲ್ಲ , ಜನರಿಂದ ಆಯ್ಕೆಯೇ ಆಗಿಲ್ಲ  : ಸಿದ್ದರಾಮಯ್ಯ

ಹೊಸಪೇಟೆ : ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭಕ್ಕೆ ಕಂದಾಯ ಇಲಾಖೆ ಆಯೋಜಿಸಿದ್ದ “ಸಮರ್ಪಣೆ ಸಂಕಲ್ಪ” ಸಮಾವೇಶದಲ್ಲಿ 111111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಉಕ್ಕಿನ ಮಹಿಳೆ ಇಂದಿರಾಗಾಂಧಿಯವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾವು ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೆ, ಪ್ರಣಾಳಿಕೆಯಲ್ಲಿ ಘೋಷಿಸದ ಹೊಸದಾದ 30 ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದ್ದೇವೆ ಎಂದ ಸಿ.ಎಂ ಸಿದ್ದರಾಮಯ್ಯ ಅವರು ಬಿಜೆಪಿ ಏಕೆ ತಾನು ಕೊಟ್ಟಿದ್ದ ಭರವಸೆಗಳನ್ನು ಈಡೇರಿಸದೆ, ಜನರ ಎದುರು ಸುಳ್ಳು ಹೇಳಿಕೊಂಡು ತಿರುಗುತ್ತಿದೆ ಎಂದು ಪ್ರಶ್ನಿಸಿದರು.

ಈಗ ಜೆಡಿಎಸ್ ಮತ್ತು ಬಿಜೆಪಿ ಕೂಡಿಕೊಂಡಿವೆ. ಆದರೆ ಬಿಜೆಪಿ ಇದುವರೆಗೂ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರಲೇ ಇಲ್ಲ. ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದದ್ದು, ಬಿಟ್ಟರೆ ರಾಜ್ಯದಲ್ಲಿ ಬಿಜೆಪಿ ಇವತ್ತಿನವರೆಗೂ ಜನರಿಂದ ಆಯ್ಕೆಯೇ ಆಗಿಲ್ಲ ಎಂದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago