ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸರ್ಕಾರವು ಮತಾಂತರ ಕಾಯ್ದೆಯನ್ನು ಜಾರಿಗೊಳಿಸುವ ಹುನ್ನಾರ ನಡೆಸಿದ್ದು, ಇದನ್ನು ಕಾಂಗ್ರೆಸ್ ಶತಾಯಗತಾಯ ವಿರೋಧಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಖಾಸಗಿಯಾಗಿ ಹಾಗೂ ಸರ್ಕಾರಿ ವತಿಯಿಂದ ಮಸೂದೆ ಮಂಡನೆ ಮಾಡುವ ತಂತ್ರಗಾರಿಕೆಯನ್ನು ಬಿಜೆಪಿ ಅನುಸರಿಸುತ್ತಿದ್ದು, ಅವರು ಯಾವುದೇ ರೂಪದಲ್ಲಿ ಮಸೂದೆ ತಂದರೂ ನಾವು ವಿರೋಧಿಸುತ್ತೇವೆ” ಎಂದರು.
ಇನ್ನು ಮತಾಂತರ ನಿಷೇಧ ಕಾಯ್ದೆ ಕೇವಲ ರಾಜ್ಯಕ್ಕೆ ಸಂಬಂಧಪಟ್ಟ ವಿಷಯವಲ್ಲ. ವಿದೇಶದಲ್ಲೂ ಇದು ಚರ್ಚೆಯಾಗುತ್ತಿದ್ದು, ರಾಜ್ಯ ಸರ್ಕಾರದ ನಡವಳಿಕೆಗಳ ಬಗ್ಗೆ ಆಕ್ಷೇಪಗಳು ಕೇಳಿಬರುತ್ತಿವೆ” ಎಂದಿದ್ದಾರೆ.
ಮತಾಂತರ ನಿಷೇಧ ಕಾಯ್ದೆಯಿಂದ ಅಭಿವೃದ್ಧಿಗೆ ಏನಾದರೂ ಸಂಬಂಧವಿದೆಯೇ? ಎಂದು ಪ್ರಶ್ನಿಸಿರುವ ಅವರು, ಚುನಾವಣೆ ಕಾರಣಕ್ಕಾಗಿ ಮಸೂದೆ ತರುವ ಬಿಜೆಪಿ ಹುನ್ನಾರ ಖಂಡನೀಯ ಎಂದು ಹೇಳಿದ್ದಾರೆ.
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…
ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…