ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀರಸವಾದ ಬಜೆಟ್ ಮಂಡಿಸಿದ್ದಾರೆ. ಜನರ ಆಶಾಭಾವನೆಗಳಿಗೆ ವಿರುದ್ಧವಾದ ಬಜೆಟ್ ಇದಾಗಿದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದ್ದಾರೆ.
ಸಂಪತ್ತಿನ ಸಮಾನ ಹಂಚಿಕೆ ಎಂಬುದು ಸಿದ್ದರಾಮಯ್ಯ ಸರ್ಕಾರದಲ್ಲಿ ಮರೀಚಿಕೆಯಾಗಿದೆ. ಅಲ್ಪಸಂಖ್ಯಾತರನ್ನು ಓಲೈಸಲೆಂದೇ ಈ ಬಜೆಟ್ ತಯಾರಿಗೊಳಿಸಲಾಗಿದೆ. ನನ್ನ ತೆರಿಗೆ ನನ್ನ ಹಕ್ಕು ಎಂದು ಕೇಂದ್ರ ಸರ್ಕಾರದೆದುರು ವಾದ ಮಂಡಿಸಿದವರು ಇಂದು ಉಡುಪಿ ಜಿಲ್ಲೆಯ ತೆರಿಗೆಯ ಪಾಲನ್ನು ಸರಿಯಾದ ಕ್ರಮದಲ್ಲಿ ನಮ್ಮ ಜಿಲ್ಲೆಗೆ ಹಿಂತಿರುಗಿಸಿಲ್ಲ. ಪ್ರವಾಸೋದ್ಯಮ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಗೆ ಯಾವುದೇ ರೀತಿಯ ಉತ್ತೇಜನ ನೀಡಿಲ್ಲ.
ಚುನಾವಣೆಯು ಹತ್ತಿರದಲ್ಲಿರುವಾಗ ಮೋದಿ ಸರ್ಕಾರವನ್ನು ದೂಷಿಸಿ ಮಂಡಿಸಿದ ಬಜೆಟ್ ಇದಾಗಿದೆ ಗ್ಯಾರಂಟಿ ಯೋಜನೆಗಳಿಂದ ಅನುಭವಿಸುತ್ತಿರುವ ನಷ್ಟವನ್ನು ಸರಿದೂಗಿಸಲು ರಾಜ್ಯದ ಜನರ ಮೇಲೆ ಸಿದ್ದರಾಮಯ್ಯ ತೆರಿಗೆಯ ಬರೆ ಹಾಕಿದ್ದಾರೆ. ಈ ಸರ್ಕಾರದಲ್ಲಿ ಎಲ್ಲವೂ ಏರುತ್ತಿದೆ. ಜನಸಾಮಾನ್ಯರ ಬದುಕಿಗೆ ಯಾವುದೇ ರೀತಿಯಲ್ಲೂ ಸಹಕಾರಿಯಾಗಿಲ್ಲ ಎಂದು ಹೇಳಿದರು.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…