ಬೆಂಗಳೂರು: ಮೋದಿಯವರು ಅಭಿವೃದ್ಧಿಪರ ಆಡಳಿತ ಕೊಡಲಿಲ್ಲ. ಮೋದಿಯವರು ಪ್ರಚಾರದಲ್ಲೇ ಆಡಳಿತ ಮಾಡಿದ್ದಾರೆ. ಸಾಕಷ್ಟು ಸಮಸ್ಯೆಗಳಿದ್ದರೂ ಅವರಿಗೆ ಇಷ್ಟೊಂದು ಅಂಕಿ ಸಂಖ್ಯೆ ತೋರಿಸುತ್ತಿರೋದು ಆಶ್ಚರ್ಯವಾಗುತ್ತಿದೆ. ಎಷ್ಟೋ ಎಕ್ಸಿಟ್ ಪೋಲ್‍ಗಳು ನಿಜವಾಗಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಹೇಳಿದ್ದಾರೆ.
ಕರ್ನಾಟಕದಲ್ಲಿ ಈ ಸಮೀಕ್ಷೆಗಳು ತೋರಿಸಿರುವುದಕ್ಕಿಂತ ಹೆಚ್ಚು ಸ್ಥಾನಗಳನ್ನು ನಾವು ಪಡೆಯುತ್ತೇವೆ. ಎರಡೂ ಪಕ್ಷಗಳು ಇನ್ನೂ ಚೆನ್ನಾಗಿ ಕೆಲಸ ಮಾಡಿದರೆ ಇನ್ನೂ ಹೆಚ್ಚಾಗಿ ಸೀಟುಗಳನ್ನು ಗೆಲ್ಲಬಹುದಿತ್ತು. ಈ ಸಮೀಕ್ಷೆಗಳನ್ನು ನಾನು ಒಪ್ಪಲ್ಲ. 23 ರ ತನಕ ಕಾಯೋಣ. ಆವತ್ತು ನಿಜವಾದ ಸಮೀಕ್ಷೆ ಬರುತ್ತೆ. ನಾವು ರಾಜ್ಯದಲ್ಲೂ, ದೇಶದಲ್ಲೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕರ್ನಾಟಕದ ಬಗ್ಗೆ ಎಕ್ಸಿಟ್ ಪೋಲ್ ಫಲಿತಾಂಶಕ್ಕೂ ನಮ್ಮ ಲೆಕ್ಕಾಚಾರಕ್ಕೂ ಹೊಂದಿಕೆ ಆಗುತ್ತಿಲ್ಲ. ನಾವು ಕಳೆದ ಬಾರಿ 11 ಕ್ಷೇತ್ರಗಳಲ್ಲಿ ಗೆದ್ದಿದ್ದೇವೆ. ಜೆಡಿಎಸ್ 2 ಗೆದ್ದಿತ್ತು. ಈ ಸಲ ಅದಕ್ಕಿಂತಲೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ನಾವು ಈಗ ಹೇಳಿರೋದಕ್ಕಿಂತಲೂ ಡಬಲ್ ಸ್ಥಾನಗಳನ್ನು ಗೆಲ್ಲುತ್ತೇವೆ. ಬಿಜೆಪಿ ಆಡಳಿತದಲ್ಲಿ ಯಾವ ಅಭಿವೃದ್ಧಿಯನ್ನೂ ಮಾಡಿಲ್ಲ. ತಮ್ಮ ಮಾತುಗಳನ್ನೇ ಅವರು ಉಳಿಸಿಕೊಳ್ಳಲಿಲ್ಲ. ಎಕ್ಸಿಟ್ ಪೋಲ್ ಗಳೇ ನಿಜವಾಗಿಬಿಟ್ಟರೆ 23ರ ತನಕ ಯಾಕೆ ಕಾಯಬೇಕು? ಎಂದು ಪ್ರಶ್ನಿಸಿದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…