Featured

ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿಗೆ ಗೆಲುವು : ಈ ಸಮೀಕ್ಷೆಗಳು ನಿಜವಾಗಲ್ಲ ; ರಾಜ್ಯದಲ್ಲೂ, ದೇಶದಲ್ಲೂ ನಾವು ಹೆಚ್ಚು ಸ್ಥಾನ ಗೆಲ್ಲುತ್ತೇವೆ: ದಿನೇಶ್ ಗುಂಡುರಾವ್ -Vishwanews24

ಬೆಂಗಳೂರು: ಮೋದಿಯವರು ಅಭಿವೃದ್ಧಿಪರ ಆಡಳಿತ ಕೊಡಲಿಲ್ಲ. ಮೋದಿಯವರು ಪ್ರಚಾರದಲ್ಲೇ ಆಡಳಿತ ಮಾಡಿದ್ದಾರೆ. ಸಾಕಷ್ಟು ಸಮಸ್ಯೆಗಳಿದ್ದರೂ ಅವರಿಗೆ ಇಷ್ಟೊಂದು ಅಂಕಿ ಸಂಖ್ಯೆ ತೋರಿಸುತ್ತಿರೋದು ಆಶ್ಚರ್ಯವಾಗುತ್ತಿದೆ. ಎಷ್ಟೋ ಎಕ್ಸಿಟ್ ಪೋಲ್‍ಗಳು ನಿಜವಾಗಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಹೇಳಿದ್ದಾರೆ.

ಕರ್ನಾಟಕದಲ್ಲಿ ಈ ಸಮೀಕ್ಷೆಗಳು ತೋರಿಸಿರುವುದಕ್ಕಿಂತ ಹೆಚ್ಚು ಸ್ಥಾನಗಳನ್ನು ನಾವು ಪಡೆಯುತ್ತೇವೆ. ಎರಡೂ ಪಕ್ಷಗಳು ಇನ್ನೂ ಚೆನ್ನಾಗಿ ಕೆಲಸ ಮಾಡಿದರೆ ಇನ್ನೂ ಹೆಚ್ಚಾಗಿ ಸೀಟುಗಳನ್ನು ಗೆಲ್ಲಬಹುದಿತ್ತು. ಈ ಸಮೀಕ್ಷೆಗಳನ್ನು ನಾನು ಒಪ್ಪಲ್ಲ. 23 ರ ತನಕ ಕಾಯೋಣ. ಆವತ್ತು ನಿಜವಾದ ಸಮೀಕ್ಷೆ ಬರುತ್ತೆ. ನಾವು ರಾಜ್ಯದಲ್ಲೂ, ದೇಶದಲ್ಲೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕರ್ನಾಟಕದ ಬಗ್ಗೆ ಎಕ್ಸಿಟ್ ಪೋಲ್ ಫಲಿತಾಂಶಕ್ಕೂ ನಮ್ಮ ಲೆಕ್ಕಾಚಾರಕ್ಕೂ ಹೊಂದಿಕೆ ಆಗುತ್ತಿಲ್ಲ. ನಾವು ಕಳೆದ ಬಾರಿ 11 ಕ್ಷೇತ್ರಗಳಲ್ಲಿ ಗೆದ್ದಿದ್ದೇವೆ. ಜೆಡಿಎಸ್ 2 ಗೆದ್ದಿತ್ತು. ಈ ಸಲ ಅದಕ್ಕಿಂತಲೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ನಾವು ಈಗ ಹೇಳಿರೋದಕ್ಕಿಂತಲೂ ಡಬಲ್ ಸ್ಥಾನಗಳನ್ನು ಗೆಲ್ಲುತ್ತೇವೆ. ಬಿಜೆಪಿ ಆಡಳಿತದಲ್ಲಿ ಯಾವ ಅಭಿವೃದ್ಧಿಯನ್ನೂ ಮಾಡಿಲ್ಲ. ತಮ್ಮ ಮಾತುಗಳನ್ನೇ ಅವರು ಉಳಿಸಿಕೊಳ್ಳಲಿಲ್ಲ. ಎಕ್ಸಿಟ್ ಪೋಲ್ ಗಳೇ ನಿಜವಾಗಿಬಿಟ್ಟರೆ 23ರ ತನಕ ಯಾಕೆ ಕಾಯಬೇಕು? ಎಂದು ಪ್ರಶ್ನಿಸಿದರು.

 

 

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

24 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

1 day ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

1 day ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

1 day ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago