ಕುಂದಾಪುರ: ಭಾನುವಾರ ರಾತ್ರಿ ಚೂರಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಕುಂದಾಪುರದ ರಾಘವೇಂದ್ರ ಶೇರುಗಾರ್(42)(ಬನ್ಸ್ ರಾಘು) ಸೋಮವಾರ ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಕುಂದಾಪುರದ ಖಾರ್ವಿಕೇರಿ ನಿವಾಸಿ ರಾಘವೇಂದ್ರ ಶೇರುಗಾರ್ ಭಾನುವಾರ ರಾತ್ರಿ ಚಿಕ್ಕಮ್ಮನಸಾಲು ರಸ್ತೆಯ ಪೋಸ್ಟ್ ಆಫೀಸ್ ಬಳಿ ತಮ್ಮ ಕಾರಿನಲ್ಲಿ ಸಾಗುತ್ತಿರುವಾಗ ಕಾರು ಸೈಡ್ ಕೊಡುವ ವಿಚಾರದಲ್ಲಿ ಗಲಾಟೆಯಾಗಿತ್ತು. ಗಲಾಟೆ ತೀವ್ರಗೊಂಡು ವ್ಯಾಗನರ್ ಕಾರಿನಲ್ಲಿದ್ದ ವ್ಯಕ್ತಿ ರಾಘವೇಂದ್ರ ಅವರ ತೊಡೆಯ ಭಾಗಕ್ಕೆ ಚೂರಿಯಿಂದ ಇರಿದು ಪರಾರಿಯಾಗಿದ್ದನು. ತೀವ್ರ ರಕ್ತಸ್ರಾವದೊಂದಿಗೆ ಒದ್ದಾಡುತ್ತಿದ್ದ ರಾಘವೇಂದ್ರ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ತೊಡೆ ಭಾಗಕ್ಕೆ ಆಳವಾಗಿ ಗಾಯವಾದ ಹಿನ್ನೆಲೆ ತೀವ್ರ ರಕ್ತಸ್ರಾವವಾಗಿದ್ದು, ಭಾನುವಾರ ತಡರಾತ್ರಿಯೇ ಶಸ್ತ್ರಚಿಕಿತ್ಸೆಗೊಳಪಡಿಸಲಾಗಿತ್ತು. ಆದರೆ ಸೋಮವಾರ ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.
ಬೆಂಗಳೂರಿನಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ರಾಘವೇಂದ್ರ ಅವರು, ಕಳೆದ ಕೆಲ ವರ್ಷಗಳಿಂದ ಕುಂದಾಪುರದಲ್ಲಿ ವಾಸವಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…