Featured

ಚೆಕ್ ಬೌನ್ಸ್ ಪ್ರಕರಣ: ಕಿರುತೆರೆ ನಟಿ ಪದ್ಮಜಾ ರಾವ್ ಗೆ 3 ತಿಂಗಳು ಜೈಲು ಶಿಕ್ಷೆ ; 40.20 ಲಕ್ಷ ರೂ. ದಂಡ – vishwanews24

ಚೆಕ್ ಬೌನ್ಸ್ ಪ್ರಕರಣ: ಕಿರುತೆರೆ ನಟಿ ಪದ್ಮಜಾ ರಾವ್ ಗೆ 3 ತಿಂಗಳು ಜೈಲು ಶಿಕ್ಷೆ ; 40.20 ಲಕ್ಷ ರೂ. ದಂಡ

ಮಂಗಳೂರು : ಚೆಕ್ ಬೌನ್ಸ್ ಪ್ರಕರಣದಲ್ಲಿ ಸಿನಿಮಾ ಮತ್ತು ಕಿರುತೆರೆ ನಟಿ ಪದ್ಮಜಾ ರಾವ್ ಅವರಿಗೆ ನಗರದ ಎಂಟನೇ ಜೆಎಂಎಫ್‌ಸಿ ನ್ಯಾಯಾಲಯ ಮೂರು ತಿಂಗಳ ಸಾದಾ ಜೈಲು ಶಿಕ್ಷೆ ಹಾಗೂ 40.20 ಲಕ್ಷ ರೂ. ದಂಡ ವಿಧಿಸಿದೆ.

ನಟಿ ಪದ್ಮಜಾ ರಾವ್ ಅವರು ಜೂನ್ 17, 2020 ರಂದು 40 ಲಕ್ಷ ಕೈ ಸಾಲ ಪಡೆದಿದ್ದರು. ಇದಕ್ಕೆ ಭದ್ರತೆಯಾಗಿ 2020ರ ಜೂನ್ 17ರಂದು ಐಸಿಐಸಿಐ ಬ್ಯಾಂಕಿನ ಬೆಂಗಳೂರಿನ ಬನಶಂಕರಿ ಶಾಖೆಯಲ್ಲಿರುವ ತಮ್ಮ ಖಾತೆಗೆ ಸಂಬಂಧಿಸಿದ ಚೆಕ್ ನೀಡಿದ್ದರು. ಈ ಚೆಕ್ ಅನ್ನು ನಗದೀಕರಿಸಲು ಹಾಕಿದಾಗ, ಪದ್ಮಜಾ ರಾವ್ ಅವರ ಖಾತೆಯಲ್ಲಿ ಅಷ್ಟೊಂದು ಮೊತ್ತ ಇರಲಿಲ್ಲ. 15 ದಿನಗಳ ಒಳಗೆ ಸಾಲದ ಹಣ ಪಾವತಿಸುವಂತೆ 2020ರ ಜೂನ್ 30ರಂದು ಪದ್ಮಜಾ ರಾವ್ ಅವರಿಗೆ ನೋಟಿಸ್ ನೀಡಿದರೂ ಅವರು ಹಣ ಪಾವತಿಸಿರಲಿಲ್ಲ ಎಂದು ವೀರೂ ಟಾಕೀಸ್ ಸಂಸ್ಥೆಯ ಮಾಲೀಕ, ಮಂಗಳೂರು ಮೇರಿಹಿಲ್ ನಿವಾಸಿ ವೀರೇಂದ್ರ ಶೆಟ್ಟಿ ನ್ಯಾಯಾಲಯದ ಮೊರೆ ಹೋಗಿದ್ದರು.

ಸಮನ್ಸ್ ಜಾರಿಯಾದ ಬಳಿಕ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾದ ಪದ್ಮಜಾ ರಾವ್ ಅವರು ನಾನು ದೂರುದಾರರಿಂದ ಯಾವುದೇ ಸಾಲ ಪಡೆದಿಲ್ಲ. ಅವರಿಗೆ ಯಾವುದೇ ಚೆಕ್ ನೀಡಿಲ್ಲ ಎಂದು ಹೇಳಿಕೆ ನೀಡಿದ್ದರು.

52.70 ಲಕ್ಷ ವಂಚನೆ ಮಾಡಿದ ಬಗ್ಗೆ ವೀರೇಂದ್ರ ಶೆಟ್ಟಿ ವಿರುದ್ಧ ಬೆಂಗಳೂರಿನ ಜೆ.ಪಿ.ನಗರ ಪೊಲೀ ಸ್ ಠಾಣೆಯಲ್ಲಿ 2020ಮಾರ್ಚ್‌ 23ರಂದು ದೂರು ದಾಖಲಿಸಿದ್ದಕ್ಕೆ ಪ್ರತಿಯಾಗಿ ತಮ್ಮ ಕಕ್ಷಿದಾರರ ವಿರುದ್ಧ ಈ ಆರೋಪ ಮಾಡಿದ್ದಾರೆ. ಅವರ ಮನೆಯಿಂದ ಚೆಕ್ ಕಳವು ಮಾಡಿ ಸಹಿಯನ್ನು ಪೋರ್ಜರಿ ಮಾಡಲಾಗಿದೆ ಎಂದು ಪದ್ಮಜಾರಾವ್ ಪರ ವಕೀಲರು ವಾದಿಸಿದ್ದರು. ಆದರೆ, ಇದಕ್ಕೆ ಪೂರಕ ಪುರಾವೆಗಳನ್ನು ಒದಗಿಸುವಲ್ಲಿ ಅವರು ವಿಫಲರಾಗಿದ್ದರು.

8ನೇ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಫವಾಜ್ ಪಿ.ಎ ಪದ್ಮಜಾ ರಾವ್ ಅವರು 40.20 ಲಕ್ಷ ರೂ. ದಂಡ ಪಾವತಿಸಬೇಕು. ಅದರಲ್ಲಿ 40.17 ಲಕ್ಷವನ್ನು ದೂರುದಾರರಿಗೆ ನೀಡಬೇಕು ಹಾಗೂ 3 ಸಾವಿರವನ್ನು ನ್ಯಾಯಾಲಯಕ್ಕೆ ಪಾವತಿಸಬೇಕು ಎಂದು ತೀರ್ಪು ನೀಡಿದ್ದಾರೆ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago