ಮಠ, ಎದ್ದೇಳು ಮಂಜುನಾಥ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿರುವ ಪ್ರತಿಭಾವಂತ ನಿರ್ದೇಶಕ ಗುರುಪ್ರಸಾದ್ ಅವರನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಂಧನವಾಗಿದ್ದು , ನಂತರ ಅವರನ್ನು ನ್ಯಾಯಾಲಯಕ್ಕೆ ಕರೆದೊಯ್ಯಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
ತಮ್ಮೊಂದಿಗೆ ಕೆಲಸ ಮಾಡುತ್ತಿದ್ದ ಶ್ರೀನಿವಾಸ್ ಎನ್ನುವವರಿಂದ ಗುರು ಪ್ರಸಾದ್ 30 ಲಕ್ಷ ರೂಪಾಯಿಯನ್ನು ಸಾಲವಾಗಿ ಪಡೆದುಕೊಂಡಿದ್ದರು. ಸಿನಿಮಾ ಮಾಡುವುದಾಗಿ ಸಾಲ ಪಡೆದಿದ್ದ ಗುರುಪ್ರಸಾದ್, ನಂತರ ಹಣ ಕೊಡದೇ ವಂಚಿಸಿದ್ದರು. ಹಣ ಕೇಳುವುದಕ್ಕೆ ಹೋದವರ ಮೇಲೆಯೇ ಸುಳ್ಳು ಕೇಸ್ ಅನ್ನು ಕೂಡ ದಾಖಲಿಸಿದ್ದರು. ಹಾಗಾಗಿ ಶ್ರೀನಿವಾಸ್ ಅವರು ಗುರುಪ್ರಸಾದ್ ಮೇಲೆ ಚೆಕ್ ಬೌನ್ಸ್ ಕೇಸ್ ದಾಖಲಿಸಿದ್ದರು.
ಶ್ರೀನಿವಾಸ್ ದೂರು ನೀಡಿದ ಹಿನ್ನೆಲೆಯಲ್ಲಿ ಕೋರ್ಟ್ ನಿಂದ ಎನ್.ಬಿ ಡಬ್ಲ್ಯು ಜಾರಿ ಆಗಿತ್ತು. ಎನ್.ಐ ಆಕ್ಟ್ ಅಡಿ ಗುರುಪ್ರಸಾದ್ ವಿರುದ್ದ ಚೆಕ್ ಬೌನ್ಸ್ ಕೇಸ್ ನಲ್ಲಿ ವಾರೆಂಟ್ ಜಾರಿ ಆಗಿತ್ತು. ಹಾಗಾಗಿ ಗಿರಿನಗರ ಪೊಲೀಸರು ಗುರುಪ್ರಸಾದ್ ಅವರನ್ನು ಬಂಧಿಸಿ, ಮೆಡಿಕಲ್ ಟೆಸ್ಟ್ ನಂತರ ಕೋರ್ಟ್ ಮುಂದೆ ಹಾಜರು ಪಡಿಸಲು ಕರೆದುಕೊಂಡು ಹೋಗಿದ್ದಾರೆ.
Join our Whatsapp group by clicking the below link 👇👇
ಉಚ್ಚಿಲ ದಸರಾಗೆ ಭರ್ಜರಿ ಸಿದ್ಧತೆ:ಶಾರದಾ ಮಾತೆ, ನವದುರ್ಗೆಯರ ಆರಾಧನೆಗೆ ಸಜ್ಜು ಉಚ್ಚಿಲ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಪಂಚಮ ವರ್ಷದ…
ಸರ್ಕಾರದ ಮುಖ್ಯಸ್ಥರಾಗಿ 25 ವರ್ಷ ಪೂರೈಸಿದ ಮೋದಿ ; ದೇಶಾದ್ಯಂತ 1 ತಿಂಗಳ ಕಾಲ ಸೇವಾ ಸಂಕಲ್ಪ ಅಭಿಯಾನ ನವದೆಹಲಿ:…
ಪಣಂಬೂರು ಬೀಚ್‌ನಲ್ಲಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಹೆಜಮಾಡಿ ಕೋಡಿಯಲ್ಲಿ ಪತ್ತೆ ಉಡುಪಿ: ಪಣಂಬೂರು ಬೀಚ್‌ನಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರದಲ್ಲಿ…
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…