Featured

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ

ನವದೆಹಲಿ: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ರಾಜ್‌ಪಾಲ್ ಯಾದವ್ ಅವರಿಗೆ ದೆಹಲಿ ಹೈಕೋರ್ಟ್‌ ಶುಕ್ರವಾರ (ಜು.10) ಮೂರು ತಿಂಗಳ ಸಾದಾ ಸಜೆ ವಿಧಿಸಿ ತೀರ್ಪು ನೀಡಿದೆ.

ನಟ ರಾಜ್‌ಪಾಲ್ ಯಾದವ್ ವಿರುದ್ಧ ದಾಖಲಾಗಿದ್ದ ಒಟ್ಟು ಏಳು ಪ್ರಕರಣಗಳಲ್ಲಿ ತಲಾ ಮೂರು ತಿಂಗಳ ಕಾರಾಗೃಹ ವಾಸದ ಶಿಕ್ಷೆ ಪ್ರಕಟಿಸಲಾಗಿದ್ದು, ಇವೆಲ್ಲವೂ ಏಕಕಾಲದಲ್ಲಿ ಚಾಲ್ತಿಯಲ್ಲಿರಲಿವೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಆದರೆ, ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಹೈಕೋರ್ಟ್‌
ನಟನಿಗೆ ಎರಡು ತಿಂಗಳ ಕಾಲಾವಕಾಶ ನೀಡಿದೆ.

ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರಿದ್ದ ಏಕಸದಸ್ಯ ಪೀಠವು ಈ ಆದೇಶ ಹೊರಡಿಸಿದ್ದು, ದೂರುದಾರ ಸಂಸ್ಥೆಯಾದ ‘ಮುರಳಿ ಪ್ರಾಜೆಕ್ಟ್ ಪ್ರೈವೇಟ್ ಲಿಮಿಟೆಡ್’ಗೆ ಪ್ರತಿ ಪ್ರಕರಣದಲ್ಲಿ ತಲಾ 1.05 ಕೋಟಿ ರೂಪಾಯಿ ಪಾವತಿಸುವಂತೆ ರಾಜ್‌ಪಾಲ್ ಯಾದವ್‌ಗೆ ನಿರ್ದೇಶಿಸಿದೆ. ಇದರೊಂದಿಗೆ ಹೆಚ್ಚುವರಿಯಾಗಿ 1.04 ಕೋಟಿ ರೂ.ಗಳನ್ನು ದೂರುದಾರರಿಗೆ ಹಾಗೂ 25,000 ರೂ.ಗಳನ್ನು ಸರ್ಕಾರಕ್ಕೆ ದಂಡದ ರೂಪದಲ್ಲಿ ಪಾವತಿಸಬೇಕಿದೆ. ಅಲ್ಲದೆ, ನಟನ ಪತ್ನಿ ರಾಧಾ ಯಾದವ್ ಅವರು ಪ್ರತಿ ಪ್ರಕರಣದಲ್ಲೂ ತಲಾ 5.51 ಕೋಟಿ ರೂ.ಗಳನ್ನು ದೂರುದಾರರಿಗೆ ನೀಡುವಂತೆ ಕೋರ್ಟ್‌ ಸೂಚಿಸಿದೆ. ನಟ ಈಗಾಗಲೇ ಪಾವತಿಸಿರುವ 2.25 ಕೋಟಿ ರೂಪಾಯಿಗಳನ್ನು ಈ ಒಟ್ಟು ಮೊತ್ತದಲ್ಲಿ ಕಡಿತಗೊಳಿಸಲಾಗುವುದು ಎಂದು ನ್ಯಾಯಾಲಯ ತಿಳಿಸಿದೆ.

ಈ ವಿವಾದ 2010ರಲ್ಲಿ ಆರಂಭವಾಗಿತ್ತು. ರಾಜ್‌ಪಾಲ್ ಯಾದವ್ ಅವರು ತಮ್ಮ ‘ಅತಾ ಪತಾ ಲಾಪತಾ’ ಚಿತ್ರದ ನಿರ್ಮಾಣಕ್ಕಾಗಿ ಮುರಳಿ ಪ್ರಾಜೆಕ್ಟ್ ಸಂಸ್ಥೆಯಿಂದ 5 ಕೋಟಿ ರೂಪಾಯಿ ಸಾಲ ಪಡೆದಿದ್ದರು. ಆದರೆ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸೋತಿದ್ದರಿಂದ ನಟ ತೀವ್ರ ಆರ್ಥಿಕ ನಷ್ಟ ಅನುಭವಿಸಿದರು. ಸಾಲ ಮರುಪಾವತಿಗೆ ನೀಡಿದ್ದ ಚೆಕ್‌ಗಳು ಬೌನ್ಸ್ ಆದ ಹಿನ್ನೆಲೆಯಲ್ಲಿ 2018ರಲ್ಲಿ ವಿಚಾರಣಾ ನ್ಯಾಯಾಲಯ ಅವರಿಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿತ್ತು. ಅಂದಿನಿಂದ ಇಂದಿನವರೆಗೆ ಬಡ್ಡಿ ಸೇರಿ ಈ ಬಾಕಿ ಮೊತ್ತ ಸುಮಾರು 9 ಕೋಟಿ ರೂಪಾಯಿಗೆ ಏರಿಕೆಯಾಗಿದೆ.

ಈ ಹಿಂದೆ ಹಣ ಪಾವತಿಸುವ ಭರವಸೆಯ ಮೇರೆಗೆ ಹೈಕೋರ್ಟ್‌ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟಿತ್ತು. ಆದರೆ ನಟ ನೀಡಿದ ಭರವಸೆಯನ್ನು ಈಡೇರಿಸದ ಕಾರಣ, ಕೋರ್ಟ್ ಶರಣಾಗುವಂತೆ ಆದೇಶಿಸಿತ್ತು. ಅದರಂತೆ ಫೆಬ್ರವರಿ 5 ರಂದು ಶರಣಾಗಿದ್ದ ನಟ, ಬಳಿಕ 1.5 ಕೋಟಿ ರೂ. ಠೇವಣಿ ಇಟ್ಟು ಮಧ್ಯಂತರ ಪರಿಹಾರ ಪಡೆದುಕೊಂಡಿದ್ದರು. ಇದೀಗ ಹೈಕೋರ್ಟ್‌ ಅವರ ಎಲ್ಲಾ ಮೇಲ್ಮನವಿಗಳನ್ನು ವಜಾಗೊಳಿಸಿ ಶಿಕ್ಷೆಯನ್ನು ಖರಾರು ಮಾಡಿದೆ.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

3 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

3 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

3 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

4 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

4 hours ago

ಪತಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ : ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪತ್ನಿ – vishwanews24

ಪತಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ : ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪತ್ನಿ ಹಾವೇರಿ: ಪತಿಗೆ ಬೇರೆ…

4 hours ago