ಚೆನ್ನೈ: ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದ್ದ ಕಳ್ಳಭಟ್ಟಿ ಸೇವಿಸಿ 25 ಮಂದಿ ಸಾವನ್ನಪ್ಪಿದ ದುರ್ಘಟನೆ ತಮಿಳುನಾಡಿನ ಉತ್ತರ ಭಾಗದ ಕಲ್ಲಾಕುರಿಚಿ ಜಿಲ್ಲೆಯಲ್ಲಿ ನಡೆದಿದೆ. ಸುಮಾರು 60 ಜನರು ಅಸ್ವಸ್ಥಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಳ್ಳಭಟ್ಟಿ ಸೇವಿಸಿ ಅಸ್ವಸ್ಥರಾದ ಜನರನ್ನು ಜಿಲ್ಲಾ ಮೆಡಿಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಜಿಲ್ಲಾಧಿಕಾರಿ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಪ್ರಕರಣ ಸಂಬಂಧ ಕೆ.ಕನ್ನುಕುಟ್ಟಿ (49) ಎನ್ನುವ ವ್ಯಕ್ತಿಯನ್ನು ಬಂಧಿಸಲಾಗಿದೆ. ಅಲ್ಲದೇ ಬಂಧಿತನಿಂದ ಸುಮಾರು 200 ಲೀಟರ್ ಅಕ್ರಮ ಅರಕ್ ಅನ್ನು ವಶಕ್ಕೆ ಪಡೆದು ತಪಾಸಣೆ ಮಾಡಲಾಗಿದೆ. ಈ ವೇಳೆ ಇದರಲ್ಲಿ ಮಾರಣಾಂತಿಕ ಮೆಥನಾಲ್ ಅನ್ನು ಹೆಚ್ಚಾಗಿ ಬಳಕೆ ಮಾಡಲಾಗಿದೆ ಎಂಬುದು ತನಿಖೆಯಿಂದ ತಿಳಿದು ಬಂದಿದೆ.
ಕಳ್ಳಭಟ್ಟಿ ಸೇವಿಸಿ ಸಾವನ್ನಪ್ಪಿದವರು ಸುದ್ದಿ ತಿಳಿದು ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ದುಃಖ ವ್ಯಕ್ತಪಡಿಸಿದ್ದಾರೆ. ಇಂತಹ ಅಪರಾಧಗಳಲ್ಲಿ ಭಾಗಿಯಾದವರ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದರೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು. ಸಮಾಜವನ್ನು ಹಾಳು ಮಾಡುವ ಇಂತಹ ಅಪರಾಧಗಳನ್ನು ತಡೆದು ಶಿಕ್ಷೆ ನೀಡಲಾಗುವುದು ಎಂಂದು ಹೇಳಿದ್ದಾರೆ.
ಇನ್ನು ಘಟನೆಗೆ ಕಾರಣರಾದ ಆರೋಪಿಗಳ ಬಂಧಿಸಲಾಗಿದೆ ಎಂದ ತಮಿಳುನಾಡು ಸರ್ಕಾರ ಹೇಳಿದೆ. ಮೃತರ ಕುಟುಂಬಗಳಿಗೆ ರಾಜ್ಯಪಾಲ ಆರ್.ಎನ್.ರವಿ ಸಾಂತ್ವನ ಹೇಳಿದ್ದಾರೆ.
ಘಟನೆ ಸಂಬಂಧ ಕಲ್ಲಾಕುರಿಚಿ ಜಿಲ್ಲಾಧಿಕಾರಿ ಶ್ರವಣ್ ಕುಮಾರನ್ನ ವರ್ಗಾವಣೆ ಮಾಡಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿ ಸಮಯ್ ಸಿಂಗ್ ಮೀನಾ ಮತ್ತು 9 ಸಿಬ್ಬಂದಿಯನ್ನ ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…