Featured

ಚೆನ್ನೈ:  ಕಬಡ್ಡಿ ಆಟವಾಡುತ್ತಿರುವ ವೇಳೆ ಹೃದಯಾಘಾತ – ಆಟಗಾರನ ದುರಂತ ಅಂತ್ಯ ; ಗೆದ್ದ ಟ್ರೋಫಿಯೊಂದಿಗೆ ಅಂತ್ಯಸಂಸ್ಕಾರ – Vishwanews24

ಚೆನ್ನೈ:  ಕಬಡ್ಡಿ ಆಟವಾಡುತ್ತಿರುವ ವೇಳೆ ಹೃದಯಾಘಾತ – ಆಟಗಾರನ ದುರಂತ ಅಂತ್ಯ ; ಟ್ರೋಫಿಯೊಂದಿಗೆ ಅಂತ್ಯಸಂಸ್ಕಾರ

ಚೆನ್ನೈ:  ಕಬಡ್ಡಿ ಆಟವಾಡುತ್ತಿರುವ ವೇಳೆ ಹೃದಯಾಘಾತದಿಂದ ಆಟಗಾರ ಸಾವು: ಟ್ರೋಫಿಯೊಂದಿಗೆ ಅಂತ್ಯಸಂಸ್ಕಾರ

ಚೆನ್ನೈ: ಕಬಡ್ಡಿ ಆಡುತ್ತಿರುವ ವೇಳೆ ವಿದ್ಯಾರ್ಥಿಯೊಬ್ಬ ಆಟದ ಮೈದಾನದಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯ ಪನ್ರುತಿ ಬಳಿಯ ಮನ್ನಾಡಿಕುಪ್ಪಂ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.

ಸೇಲಂ ಜಿಲ್ಲೆಯ ಖಾಸಗಿ ಕಾಲೇಜಿನ ದ್ವಿತೀಯ ವರ್ಷದ ಬಿಎಸ್ಸಿ ವಿದ್ಯಾರ್ಥಿ ವಿಮಲ್‌ರಾಜ್ (22) ಮೃತ ದುರ್ದೈವಿ.

ಸೇಲಂ ಜಿಲ್ಲೆಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ಪ್ರಾಣಿಶಾಸ್ತ್ರ ವ್ಯಾಸಂಗ ಮಾಡುತ್ತಿದ್ದ ವಿಮಲರಾಜ್ ವಾರಾಂತ್ಯಕ್ಕೆ ಮನೆಗೆ ಬಂದಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನಿನ್ನೆ ಸಂಜೆ ನಡೆದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಮುರಟ್ಟು ಕಾಳಾಯಿ ತಂಡವನ್ನು ಪ್ರತಿನಿಧಿಸುತ್ತಿದ್ದರು.

ಇದನ್ನೂ ಓದಿ : ಉಡುಪಿ : ಪಿಎಸ್​ಐ ಹಗರಣ – ನನಗೆ ಮೊದಲೇ ಗೊತ್ತಿತ್ತು: ಮಾಜಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ – Vishwanews24 

ವಿಮಲ್‌ ರೈಡ್‌ ಮಾಡುತ್ತಿದ್ದ ವೇಳೆ, ಎದುರಾಳಿ ತಂಡದ ಸದಸ್ಯರು ಅವರನ್ನು ಎಳೆದು ಕೆಳಗೆ ಬೀಳಿಸಿದ್ದಾರೆ. ಬಳಿಕ ಮೇಲಕ್ಕೇಳಲು ಪ್ರಯತ್ನಿಸುತ್ತಿರುವ ವೇಳೆ ಮತ್ತೆ ನೆಲದ ಮೇಲೆ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ವೇಳೆ ವಿಮಲ್‌ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ವಿಲ್ಲುಪುರಂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಗೆಳೆಯನ ಅಗಲಿಕೆಯ ನೋವಿನ ನಡುವೆ ಮೈದಾನಕ್ಕಿಳಿದ ಮುರುಟ್ಟು ಕಾಳೈ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದ್ದು ವಿಶೇಷ. ಅಷ್ಟೇ ಅಲ್ಲದೆ ಗೆದ್ದ ಟ್ರೋಫಿಯೊಂದಿಗೆ ವಿಮಲ್ ರಾಜ್ ಅವರ ಅಂತ್ಯ ಸಂಸ್ಕಾರವನ್ನು ನೆರವೇರಿಸಿದ್ದಾರೆ ಎಂದು ತಿಳಿದುಬಂದಿದೆ.

ನಾನು ರಾಜಕೀಯಕ್ಕೆ ಬರುವುದಕ್ಕೆ ಕಾರಣ ಮುಸ್ಲಿಂ ಗುರುಗಳಲ್ಲ , ಆದಿಚುಂಚನಗಿರಿ ಸ್ವಾಮಿಗಳು : ಜಮೀರ್‌ – Vishwanews24

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

12 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

12 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

12 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

12 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

13 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago