ಚೆನ್ನೈ : ಈಗಾಗಲೇ ಚೆನ್ನೈ ಮತ್ತು ತಮಿಳುನಾಡಿನಲ್ಲಿ ಮಳೆಯ ಅಬ್ಬರಕ್ಕೆ ನಾಲ್ವರು ಸಾವನ್ನಪ್ಪಿದ್ದು, ಇದೀಗ ಮತ್ತೆ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಂಗಳವಾರ ಮುನ್ಸೂಚನೆ ನೀಡಿದೆ.
ಚೆನ್ನೈನ ತಗ್ಗು ಪ್ರದೇಶಗಳು ಕಳೆದೆರಡು ದಿನಗಳಿಂದ ಜಲಾವೃತವಾಗಿದ್ದು, ಮಳೆಯಿಂದಾಗಿ ತಮಿಳುನಾಡಿನಲ್ಲಿ ಈಗಾಗಲೇ ನಾಲ್ವರು ಸಾವನ್ನಪ್ಪಿದ್ದಾರೆ.
ಇನ್ನು ನೀಲಗಿರಿ, ಕೊಯಮತ್ತೂರು, ದಿಂಡಿಗಲ್, ಥೇಣಿ, ತೆಂಕಶಿ ಮತ್ತು ತಿರುನಲ್ವೇಲಿ ಸೇರಿದಂತೆ ಸುಮಾರು 14 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಈಗಾಗಲೇ ಈ ಪ್ರದೇಶದ 60 ಮನೆಗಳು ನಾಶವಾಗಿದ್ದು, 4 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದ ಕೆಲವು ಭಾಗಗಳಲ್ಲಿ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಡುಪಿ : ಯುವತಿ ನಾಪತ್ತೆ ಉಡುಪಿ: ನಗರದ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತೀಕ್ಷಾ (18) ಎನ್ನುವ ಯುವತಿಯು ಆಗಸ್ಟ್…
ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…
ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…
ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…
ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ…