Featured

ಚೆನ್ನೈ: ರೈಲ್ವೆ ಹಳಿ ಮೇಲೆ ನಿಂತು ಇನ್‌ಸ್ಟಾಗ್ರಾಮ್​ನಲ್ಲಿ ವಿಡಿಯೋ ಅಪ್ಲೋಡ್ : ಯುವಕರ ಮೇಲೆ ಹರಿದ ರೈಲು, ಮೂವರು ಸಾವು – Vishwanews24

ರೈಲ್ವೆ ಹಳಿ ಮೇಲೆ ನಿಂತು  ಇನ್‌ಸ್ಟಾಗ್ರಾಮ್​ನಲ್ಲಿ ವಿಡಿಯೋ ಅಪ್ಲೋಡ್ : ಯುವಕರ ಮೇಲೆ ಹರಿದ ರೈಲು, ಮೂವರು ಸಾವು

ಚೆನ್ನೈ: ಇನ್‌ಸ್ಟಾಗ್ರಾಮ್​ನಲ್ಲಿ ವಿಡಿಯೋ ಅಪ್ಲೋಡ್ ಮಾಡಲು ಮೂವರು ಯುವಕರು​ ರೈಲ್ವೆ ಹಳಿ ಮೇಲೆ ನಿಂತು ವಿಡಿಯೋ ಮಾಡುತ್ತಿದ್ದಾಗ ದಿಢೀರ್​ ಆಗಮಿಸಿದ ರೈಲಿಗೆ ಒಂದೇ ಊರಿನ ಮೂವರು ವಿದ್ಯಾರ್ಥಿಗಳು ಉಸಿರು ನಿಲ್ಲಿಸಿದ್ದಾರೆ.

ಚೆಂಗಲ್ಪಟ್ಟು ಪಕ್ಕದ ಚೆಟ್ಟಿಪುನ್ನಿಯಂ ಪ್ರದೇಶದ ಅಶೋಕ್ ಕುಮಾರ್, ಪ್ರಕಾಶ್ ಮತ್ತು ಮೋಹನ್ ಎಂಬುವರು ಮೃತ ವಿದ್ಯಾರ್ಥಿಗಳು. ಇವರು ಆಗಾಗ ಸೆಲ್ಫಿ ವಿಡಿಯೋ ಮಾಡಿ ಇನ್ ಸ್ಟಾಗ್ರಾಮ್​ನಲ್ಲಿ ಹಾಕುತ್ತಿದ್ದರು.

ಮಾರ್ಚ್ 7ರ ಸಂಜೆ ಮೂವರು ರೈಲು ಹಳಿ ಮೇಲೆ ನಿಂತು ವಿಡಿಯೋ ಮಾಡುತ್ತಿದ್ದಾಗ ಚೆನ್ನೈನಿಂದ ಚೆಂಗಲ್ಪಟ್ಟಿಗೆ ಬರುತ್ತಿದ್ದ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಯುವಕರ ಮೃತದೇಹ ಸ್ಥಳದಲ್ಲೇ ಚೆಲ್ಲಾಪಿಲ್ಲಿಯಾಗಿದ್ದು, ಧಾರುಣವಾಗಿ ಸಾವನ್ನಪ್ಪಿದ್ದಾರೆ.

ಚೆಂಗಲ್ಪಟ್ಟು ರೈಲ್ವೆ ಪೊಲೀಸರು ಯುವಕರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

6 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

12 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

12 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

13 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

13 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

14 hours ago