ಚೆನ್ನೈ : CBFC ವಿರುದ್ಧ ತಮಿಳು ನಟ, ನಿರ್ಮಾಪಕ ವಿಶಾಲ್ ಅವರ ಲಂಚ ಕೇಳಿದ ಆರೋಪಕ್ಕೆ ಸಂಬಂಧಿಸಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತನಿಖೆಗೆ ಶುಕ್ರವಾರ ಆದೇಶಿಸಿದೆ.
ವಿಶಾಲ್ ಅವರು ತಮ್ಮ ಇತ್ತೀಚೆಗೆ ಬಿಡುಗಡೆಯಾದ ‘ಮಾರ್ಕ್ ಆಂಟನಿ’ಯ ಹಿಂದಿ ಸೆನ್ಸಾರ್ ಹಕ್ಕುಗಳಿಗಾಗಿ 6.5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿರುವುದಾಗಿ ಸೆಂಟ್ರಲ್ ಬ್ಯೂರೋ ಆಫ್ ಫಿಲ್ಮ್ ಸರ್ಟಿಫಿಕೇಶನ್ (CBFC) ಮುಂಬೈ ಕಚೇರಿಯ ವಿರುದ್ಧ ಆರೋಪಿಸಿದ್ದರು.
ವಿಡಿಯೋ ಟಿಪ್ಪಣಿಯಲ್ಲಿ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಂದ ಸಹಾಯ ಕೋರಿದ್ದರು. ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಇದೀಗ ವಿಶಾಲ್ ಅವರ ಭ್ರಷ್ಟಾಚಾರ ಆರೋಪಗಳಿಗೆ X ನಲ್ಲಿ ಅಧಿಕೃತ ಹೇಳಿಕೆಯ ಮೂಲಕ ಪ್ರತಿಕ್ರಿಯಿಸಿದೆ.
‘ನಟ ವಿಶಾಲ್ ಅವರು CBFC ಯಲ್ಲಿನ ಭ್ರಷ್ಟಾಚಾರದ ಕುರಿತು ಹೇಳಿಕೊಂಡಿರುವ ವಿಷಯ ಅತ್ಯಂತ ದುರದೃಷ್ಟಕರವಾಗಿದೆ. ಸರಕಾರವು ಭ್ರಷ್ಟಾಚಾರದ ವಿರುದ್ಧ ಶೂನ್ಯ ಸಹಿಷ್ಣುತೆಯನ್ನು ಹೊಂದಿದೆ. ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರನ್ನು ವಿಚಾರಣೆ ನಡೆಸಲು ನಿಯೋಜಿಸಲಾಗಿದೆ. CBFC ನಿಂದ ಯಾವುದೇ ಕಿರುಕುಳದ ಇತರ ನಿದರ್ಶನಗಳ ಬಗ್ಗೆ ಮಾಹಿತಿಯನ್ನು ಒದಗಿಸುವ ಮೂಲಕ ಸಚಿವಾಲಯದೊಂದಿಗೆ ಸಹಕರಿಸಲು ನಾವು ಪ್ರತಿಯೊಬ್ಬರನ್ನು ವಿನಂತಿಸುತ್ತೇವೆ’ ಎಂದು ಎಕ್ಸ್ ಪೋಸ್ಟ್ ಮಾಡಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…