ಬೆಂಗಳೂರು: ಜಂತಕಲ್ ಗಣಿ ಪರವಾನಿಗೆ ನವೀಕರಣ ಪ್ರಕರಣದಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ರಿಲೀಫ್ ದೊರೆತಿದೆ.
ಪ್ರಕರಣದ ತನಿಖೆ ನಡೆಸುತ್ತಿದ್ದ ಎಸ್ ಐಟಿ ದೋಷಾರೋಪ ಪಟ್ಟಿಯನ್ನು ಕೋರ್ಟ್ ಗೆ ಸಲ್ಲಿಸಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಕುಮಾರಸ್ವಾಮಿ ಅವರ ಹೆಸರನ್ನು ಕೈಬಿಟ್ಟಿದೆ.
ವಿನೋದ್ ಗೋಯಲ್ ಗೆ ಭೂಮಿ ಮಂಜೂರು ಮಾಡುವಂತೆ ಕುಮಾರಸ್ವಾಮಿ ಸಿಎಂ ಆಗಿದ್ದಾಗ ತಮಗೆ ಮೌಖಿಕ ಆದೇಶ ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾ ಹೇಳಿದ್ದಾರೆ. ಬಡೇರಿಯಾ ಹೇಳಿಕೆ ಆಧರಿಸಿ ಕುಮಾರಸ್ವಾಮಿ ಅವರನ್ನು ಎಸ್‍ಐಟಿ ವಿಚಾರಣೆಗೆ ಒಳಪಡಿಸಿತ್ತು. ಇನ್ನು ವಿನೋದ್ ಗೋಯಲ್ ಮೂಲಕ ತನ್ನ ಮಗ ಗಗನ್ ಬಡೇರಿಯಾ ಅಕೌಂಟ್‍ಗೆ ಗಂಗಾರಾಮ್ ಹಣ ಹಾಕಿಸಿಕೊಂಡಿದ್ದರು ಎಂಬ ಆರೋಪವೂ ಇದೆ. ಗಂಗಾರಾಮ್ ಐಎಎಸ್ ಅಧಿಕಾರಿ ಆದ್ದರಿಂದ ಸರ್ಕಾರದ ಅನುಮತಿ ಕೇಳಬೇಕು. ಹೀಗಾಗಿ ಗಂಗಾರಾಮ್ ಬಡೇರಿಯಾ ಮೇಲೆ ದೋಷಾರೋಪ ಪಟ್ಟಿ ಹಾಕಲು ಸರ್ಕಾರದ ಅನುಮತಿ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ವಿನೋದ್ ಘೋಯಲ್ ಮತ್ತು ಗಗನ್ ಬಡೇರಿಯಾ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.
ಬಡೇರಿಯಾ ಹೇಳಿಕೆ ಆಧರಿಸಿ ಕುಮಾರಸ್ವಾಮಿ ಅವರನ್ನು ಎಸ್‍ಐಟಿ ವಿಚಾರಣೆಗೆ ಒಳಪಡಿಸಿದ್ದರು. ಇನ್ನು ವಿಚಾರಣೆ ಬಳಿಕ ಕುಮಾರಸ್ವಾಮಿ ಅವರ ಮೇಲೆ ಯಾವುದೇ ಸಾಕ್ಷ್ಯಗಳು ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ವಿನೋದ್ ಘೋಯಲ್ ಮತ್ತು ಗಗನ್ ಬಡೇರಿಯಾ (ಗಂಗಾರಾಮ್ ಐಎಎಸ್ ಅಧಿಕಾರಿ ಮಗ) ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದ ಕುಮಾರಸ್ವಾಮಿಯವರ ಹೆಸರನ್ನು ಎಸ್‍ಐಟಿ ಪ್ರಕರಣದಿಂದ ಕೈ ಬಿಟ್ಟು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದೆ,..
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…