ರಾಜ್ಯ ನ್ಯೂಸ್

ಜಗತ್ತಿನಲ್ಲಿ ಸೂರ್ಯ-ಚಂದ್ರ ಇರುವುದು ಎಷ್ಟು ಸತ್ಯವೋ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ’ ; ಬಿ.ಎಸ್‌.ಯಡಿಯೂರಪ್ಪ

ಹಾವೇರಿ: “ಮುಂದಿನ 42 ದಿನಗಳಲ್ಲಿ ಮನೆಗೆ ಹೋಗುವ ಸಿದ್ದರಾಮಯ್ಯ ಬಗ್ಗೆ ನಾನು ಟೀಕೆ ಮಾಡುವುದಿಲ್ಲ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ತಾಲೂಕಿನ ಕಾಗಿನೆಲೆಯಲ್ಲಿ ನಡೆದ ಬಿಜೆಪಿಯ ಹಿಂದುಳಿದ ವರ್ಗಗಳ ರಾಜ್ಯಮಟ್ಟದ ಸಮಾವೇಶದಲ್ಲಿ ಮಾತನಾಡಿ, “ಸಿದ್ದರಾಮಯ್ಯನವರಿಗೆ ಹಣಕಾಸು ಸಚಿವರಾಗಿದ್ದಾಗ ಕಾಗಿನೆಲೆ, ಕನಕದಾಸರ ನೆನಪು ಆಗಿರಲಿಲ್ಲ. ನಾನು ಮುಖ್ಯಮಂತ್ರಿಯಾಗಿದ್ದಾಗ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ರಚಿಸಿ ಕೋಟ್ಯಂತರ ರೂ.ಅನುದಾನ ಕೊಟ್ಟಿದ್ದೆನೆ. ಜಗತ್ತಿನಲ್ಲಿ ಸೂರ್ಯ-ಚಂದ್ರ ಇರುವುದು ಎಷ್ಟು ಸತ್ಯವೋ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ’ ಎಂದರು. “ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ನಾನು ಮುಖ್ಯಮಂತ್ರಿ ಆದ ಮೇಲೆ ಹಿಂದುಳಿದವರ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತೇನೆ. ಕೇಂದ್ರದಿಂದ ದೊಡ್ಡ ಆರ್ಥಿಕ ನೆರವು ತಂದು ಅಭಿವೃದ್ಧಿ ಮಾಡುತ್ತೇನೆ. ನೀರಾವರಿಗೆ ಲಕ್ಷ ಕೋಟಿ ರೂ. ಅನುದಾನ ಮೀಸಲಿಟ್ಟು ರೈತರ ಭೂಮಿಗೆ ನೀರು ಹರಿಸುವುದಾಗಿ ಹೇಳಿದರು. ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರಿಗೆ ಕಂಬಳಿ ಹೊದಿಸಿ ಸನ್ಮಾನಿಸಲಾಯಿತು.

ಸಿದ್ದರಾಮಯ್ಯಗೆ ಇದು ಕೊನೇ ಚುನಾವಣೆ: ಕೆ.ಎಸ್‌. ಈಶ್ವರಪ್ಪ
ಹಾವೇರಿ: ಸಿದ್ದರಾಮಯ್ಯ ಅವರೇ ಹೇಳುವಂತೆ ಇದು ಅವರ ಕೊನೆಯ ಚುನಾವಣೆ. ಈ ಚುನಾವಣೆಯಲ್ಲಿ ಕಾಂಗ್ರೆಸ್‌ ವಿಧಾನಸಭೆಯಿಂದ ಔಟ್‌ (ಹೊರಗೆ). ಬಿಜೆಪಿ ಇನ್‌ (ಒಳಗೆ) ಆಗಲಿದೆ ಎಂದು ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಕೆ.ಎಸ್‌. ಈಶ್ವರಪ್ಪ ಹೇಳಿದರು. ಮಂಗಳವಾರ ಕಾಗಿನೆಲೆಯಲ್ಲಿ ನಡೆದ ಬಿಜೆಪಿ ರಾಜ್ಯಮಟ್ಟದ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಮಾತನಾಡಿ, ಸಿದ್ದರಾಮಯ್ಯ ಚುನಾವಣಾ ಚಾಣಕ್ಯ ಅಮಿತ್‌ ಶಾ ಬಗ್ಗೆ ಟೀಕೆ ಮಾಡುತ್ತಾರೆ. ಅವರು ತಮ್ಮ ಕೊನೆಯ ಟೀಕೆ ಮಾಡಿ ಮನೆಗೆ ಹೋಗಲಿ. ಅವರು ಚಾಮುಂಡೇಶ್ವರಿ ಕ್ಷೇತ್ರದಿಂದ ಗೆಲ್ಲುವುದೇ ಇಲ್ಲ. ಅವರನ್ನು ಸಿಎಂ ಮಾಡುತ್ತೇನೆಂದು ರಾಹುಲ್ ಗಾಂಧಿಯೂ ಹೇಳಿಲ್ಲ. ಸೋನಿಯಾ ಗಾಂಧಿಯೂ ಹೇಳಿಲ್ಲ. ಇನ್ನು ಪಕ್ಷದ ರಾಜ್ಯಾಧ್ಯಕ್ಷರ ಒಪ್ಪಿಗೆ ಕೂಡ ಇಲ್ಲ .ಮೇ 12ಕ್ಕೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಯ 22ನೇ ರಾಜ್ಯವಾಗಿ ಕರ್ನಾಟಕದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ ಆಗುತ್ತಾರೆ ಎಂದರು. 

 

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

3 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

3 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

3 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

3 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

3 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

3 days ago