Featured

ಜಗತ್ತಿನಾದ್ಯಂತ ಮೈಕ್ರೋಸಾಫ್ಟ್‌ ನಲ್ಲಿ ತಾಂತ್ರಿಕ ಸಮಸ್ಯೆ ; ಸೇವೆಯಲ್ಲಿ ವ್ಯತ್ಯಯ – vishwanews24

ಮೈಕ್ರೋಸಾಫ್ಟ್‌ ನಲ್ಲಿ ತಾಂತ್ರಿಕ ಸಮಸ್ಯೆ ; ವಿಮಾನಯಾನ ಮತ್ತಿತರ ಸೇವೆಯಲ್ಲಿ ವ್ಯತ್ಯಯ

ಹೊಸದಿಲ್ಲಿ: ಮೈಕ್ರೋಸಾಫ್ಟ್‌ 365 ಆ್ಯಪ್‌ಗಳು ಮತ್ತು ಸೇವೆಗಳಲ್ಲಿ ಇಂದು ಉಂಟಾದ ತಾಂತ್ರಿಕ ವೈಫಲ್ಯವು ಭಾರತ ಸೇರಿದಂತೆ ಜಗತ್ತಿನಾದ್ಯಂತ ವಿಮಾನಯಾನ ಮತ್ತಿತರ ಕ್ಷೇತ್ರಗಳ ಸೇವೆಗಳಲ್ಲಿ ವ್ಯತ್ಯಯವುಂಟು ಮಾಡಿದೆ.

ತನ್ನ ಸೇವೆಯಲ್ಲಿ ಉಂಟಾಗಿರುವ ಸಮಸ್ಯೆಯನ್ನು ಸರಿಪಡಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಮೈಕ್ರೋಸಾಫ್ಟ್‌ ಹೇಳಿದೆ. ಆಸ್ಟ್ರೇಲಿಯಾ ಮತ್ತು ನ್ಯೂಝಿಲೆಂಡ್‌ನಲ್ಲಿ ಬ್ಯಾಂಕ್‌ಗಳ ಕಂಪ್ಯೂಟರ್‌ ವ್ಯವಸ್ಥೆಗಳು ಬಾಧಿತವಾಗಿ ಸಮಸ್ಯೆ ಉಂಟಾಗಿದ್ದರೆ ಭಾರತದಲ್ಲಿ ಪ್ರಮುಖ ವಿಮಾನಯಾನ ಸಂಸ್ಥೆಗಳಾದ ಆಕಾಸಾ, ಇಂಡಿಗೋ, ಏರ್‌ ಇಂಡಿಯಾ ಮತ್ತು ಸ್ಪೈಸ್‌ಜೆಟ್‌ ಕೂಡ ಸಮಸ್ಯೆಗಳನ್ನು ಎದುರಿಸಿವೆ. ದಿಲ್ಲಿ ಹಾಗೂ ಬೆಂಗಳೂರು ವಿಮಾನ ನಿಲ್ದಾಣಗಳಲ್ಲೂ ಕೆಲ ಸೇವೆಗಳು ಬಾಧಿತವಾಗಿವೆ. ಹಲವು ವಿಮಾನಯಾನ ಸಂಸ್ಥೆಗಳು ಸೇವೆಯಲ್ಲುಂಟಾದ ವ್ಯತ್ಯಯಗಳ ಬಗ್ಗೆ ಹೇಳಿಕೆಗಳನ್ನು ಬಿಡುಗಡೆಗೊಳಿಸಿವೆ.

ಮೈಕ್ರೋಸಾಫ್ಟ್‌ ಸೇವೆಯಲ್ಲಿ ತಾಂತ್ರಿಕ ವೈಫಲ್ಯದಿಂದ ಲಂಡನ್‌ ಸ್ಟಾಕ್‌ ಎಕ್ಸ್‌ಚೇಂಜ್‌ ಕೂಡ ಸಮಸ್ಯೆಗೀಡಾಗಿದೆ.

ಜಗತ್ತಿನಾದ್ಯಂತ ಲಕ್ಷಾಂತರ ವಿಂಡೋಸ್‌ ಬಳಕೆದಾರರ ಪರದೆಗಳಲ್ಲಿ ಬ್ಲೂ ಸ್ಕ್ರೀನ್‌ ಆಫ್‌ ಡೆತ್‌ ಕಾಣಿಸಿಕೊಂಡಿದೆ ಹಾಗೂ ಕಂಪ್ಯೂಟರ್‌ಗಳು ಶಟ್‌ಡೌನ್‌ ಆಗಿ ಮರುಆರಂಭಗೊಂಡಿವೆ. ಕೆಲವೆಡೆ ಕಂಪ್ಯೂಟರ್‌ಗಳು ಸತತವಾಗಿ ಮರುಆರಂಭಗೊಳ್ಳುತ್ತಿವೆ.

ಬ್ಲೂ ಸ್ಕ್ರೀನ್‌ ದೋಷಗಳನ್ನು ಬ್ಲ್ಯಾಕ್‌ ಸ್ಕ್ರೀನ್‌ ದೋಷಗಳು ಅಥವಾ STOP ಕೋಡ್‌ ದೋಷಗಳೆಂದು ಕರೆಯಲಾಗುತ್ತದೆ.

ಸಮಸ್ಯೆ ಪರಿಹಾರ ನಿಟ್ಟಿನಲ್ಲಿ ಕ್ರಮಗಳು ಮುಂದುವರಿದಿವೆ ಎಂದು ಮೈಕ್ರೋಸಾಫ್ಟ್‌ ಹೇಳಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

3 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago