ನ್ಯೂಯಾರ್ಕ್: ರಿಲಯನ್ಸ್ ಇಂಡಸ್ಟ್ರೀಜ್‌ನ ಚೇರಮನ್ ಮುಕೇಶ್ ಅಂಬಾನಿ ಅವರು ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದು, ಚೀನಾದ ಉದ್ಯಮಿ ಜಾಕ್ ಮಾ ಅವರನ್ನೂ ಹಿಂದಿಕ್ಕಿದ್ದಾರೆ.
ಪ್ರತಿಷ್ಠಿತ ಫೋಬ್ಸ್ ನಿಯತಕಾಲಿಕೆ ಬಿಡುಗಡೆ ಮಾಡಿರುವ ವಿಶ್ವದ ಶ್ರೀಮಂತ ವ್ಯಕ್ತಿಗಳ ಪಟ್ಟಿಯಲ್ಲಿ ಈ ವಿಷಯವನ್ನು ಉಲ್ಲೇಖಿಸಲಾಗಿದೆ.
ಅಮೆರಿಕ ಹಾಗೂ ಚೀನಾ ನಂತರ ಗರಿಷ್ಠ ಸಂಖ್ಯೆಯ ಕೋಟ್ಯಧೀಶರನ್ನು ಹೊಂದಿರುವ ರಾಷ್ಟ್ರ ಭಾರತ ಎಂದು ಫೋಬ್ಸ್ ಬಿಡುಗಡೆ ಮಾಡಿರುವ ವಿಶ್ವದ ಸಿರಿವಂತರ ಕುರಿತ 35ನೇ ವಾರ್ಷಿಕ ಪಟ್ಟಿಯಲ್ಲಿ ಹೇಳಲಾಗಿದೆ.
ಅಂಬಾನಿ ಅವರು ಏಷ್ಯಾದಲ್ಲಿಯೇ ಅತ್ಯಂತ ಶ್ರೀಮಂತ ವ್ಯಕ್ತಿ ಎನಿಸಿದ್ದು, ಜಗತ್ತಿನ ಶ್ರೀಮಂತರ ಪಟ್ಟಿಯಲ್ಲಿ 10ನೇ ಸ್ಥಾನ ಪಡೆದಿದ್ದಾರೆ. ಅವರ ಒಟ್ಟು ಆಸ್ತಿ ಮೌಲ್ಯ 84.5 ಶತಕೋಟಿ ಡಾಲರ್ ಎಂದು ಪತ್ರಿಕೆ ಹೇಳಿದೆ.
ಸಿಡಿ ಪ್ರಕರಣ : ಕಮಲ್‌ಪಂತ್ ಸೇರಿದಂತೆ 3 ಪೊಲೀಸ್ ಅಧಿಕಾರಿಗಳ ವಿರುದ್ದ ಖಾಸಗಿ ಮೊಕದ್ದಮೆ ದಾಖಲು -Vishwanews24
ಅಮೆಜಾನ್‌ನ ಸಿಇಒ ಹಾಗೂ ಸಂಸ್ಥಾಪಕ ಜೆಫ್ ಬಿಜೋಸ್ ಅವರು ಸತತ ನಾಲ್ಕನೇ ವರ್ಷವೂ ಈ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ. ಅವರ ಒಟ್ಟು ಆಸ್ತಿ 177 ಶತಕೋಟಿ ಡಾಲರ್ ಇದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಅವರ ಆಸ್ತಿಯಲ್ಲಿ 64 ಶತಕೋಟಿ ಡಾಲರ್ ಏರಿಕೆ ಕಂಡು ಬಂದಿದೆ ಎಂದು ವಿವರಿಸಲಾಗಿದೆ.
ಜಗತ್ತಿನ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಸ್ಪೇಸ್‌ಎಕ್ಸ್ ಸಂಸ್ಥಾಪಕ ಇಲಾನ್ ಮಸ್ಕ್ ಇದ್ದಾರೆ. ಅವರ ಒಟ್ಟು ಆಸ್ತಿ ಮೌಲ್ಯ 151 ಶತಕೋಟಿ ಡಾಲರ್.
‘ಟೆಸ್ಲಾ ಷೇರುಗಳ ಮೌಲ್ಯ ಶೇ 705ರಷ್ಟು ಏರಿಕೆಯಾಗಿರುವುದೇ ಮಸ್ಕ್ ಅವರ ಆಸ್ತಿ ಮೌಲ್ಯದಲ್ಲಿ ಹೆಚ್ಚಳವಾಗಲು ಕಾರಣ’ ಎಂದು ಫೋಬ್ಸ್ ವಿಶ್ಲೇಷಿಸಿದೆ.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…