Featured

ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠ ನಿರ್ದಿಷ್ಟ ಪಕ್ಷಕ್ಕೆ ಬೆಂಬಲ ನೀಡಿಲ್ಲ : ಪತ್ರಿಕಾ ಪ್ರಕಟಣೆ – Vishwanews24

ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠ ನಿರ್ದಿಷ್ಟ ಪಕ್ಷಕ್ಕೆ ಬೆಂಬಲ ನೀಡಿಲ್ಲ : ಪತ್ರಿಕಾ ಪ್ರಕಟಣೆ

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ವೇಳೆಯಲ್ಲಿ ಮಹಾ ಸಂಸ್ಥಾನಕ್ಕೆ ಅನೇಕ ಮಂದಿ ಅಭ್ಯರ್ಥಿಗಳು ಆಗಮಿಸಿ, ಜಗದ್ಗುರುಗಳವರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದ್ದಾರೆ.

ಹೆಚ್ಚಿನ ಉಮೇದ್ವಾರರ ಪರಿಚಯ ಇರುವುದರಿಂದ ಎಲ್ಲರೊಡನೆ ಕುಶಲೋಪರಿ, ವಿಚಾರ ವಿನಿಮಯ ನಡೆಸಿ ಶುಭವಾಗಲಿ ಎಂದು ಅನುಗ್ರಹ ಮಂತ್ರಾಕ್ಷತೆಯನ್ನು ಜಗದ್ಗುರುಗಳವರು ನೀಡಿರುತ್ತಾರೆ.

ಇದನ್ನು ತಮ್ಮದೇ ಆದ ರೀತಿಯಲ್ಲಿ ವ್ಯಾಖ್ಯಾನಿಸಿ ತಮಗೇ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಪತ್ರಿಕಾ ವರದಿ, ಸಮೂಹ ಮಾಧ್ಯಮಗಳಲ್ಲಿ ಹೇಳಿಕೆ ನೀಡಿದಲ್ಲಿ ಆನೆಗುಂದಿ ಮಹಾಸಂಸ್ಥಾನವು ಜವಾಬ್ದಾರರಾಗುವುದಿಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸುತ್ತೇವೆ.

ಹಾಗೆಯೇ ಜಗದ್ಗುರುಗಳವರು ಮಹಾ ಸಂಸ್ಥಾನದಿಂದ ಯಾವುದೇ ರಾಜಕೀಯ ಪಕ್ಷಕ್ಕೆ ಸೀಮಿತವಾದ ಬೆಂಬಲ ನೀಡಿಲ್ಲ ಅಲ್ಲದೆ ನಿರ್ದಿಷ್ಟ ಪಕ್ಷವನ್ನು ಬೆಂಬಲಿಸಬೇಕು ಎನ್ನುವ ಕರೆಯನ್ನೂ ಸಮಾಜಕ್ಕೆ ನೀಡಿಲ್ಲ.

ಹಾಗೆ ಏನಾದರೂ ಪತ್ರಿಕೆಗಳಲ್ಲಿ, ಸಮೂಹ ಮಾದ್ಯಮಗಳಲ್ಲಿ ಪ್ರಕಟವಾಗಿದ್ದಲ್ಲಿ ಅದು ಅವರ ವೈಯುಕ್ತಿಕ ಅಭಿಪ್ರಾಯ ಅಲ್ಲದೆ ಇದಕ್ಕೆ ಆನೆಗುಂದಿ ಮಹಾ ಸಂಸ್ಥಾನವು ಜವಾಬ್ದಾರಿ ಅಲ್ಲ ಎಂದು ಈ ಮೂಲಕ ಸ್ಪಷ್ಟೀಕರಣ ನೀಡುತ್ತಿದ್ದೇವೆ.

ಇತೀ
ಜಗದ್ಗುರುಗಳ ಸೇವೆಯಲ್ಲಿ

ಲೋಕೇಶ್ ಎಂ ಬಿ ಆಚಾರ್ ಕಂಬಾರು
ಪ್ರಧಾನ ಕಾರ್ಯದರ್ಶಿ

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

24 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

24 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

1 day ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

1 day ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

1 day ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

1 day ago