Featured

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ – vishwanews24

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ

ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ ಪರವಾಗಿ ಜನಗಣತಿ ಕಾಯ್ದೆ-1948ರ ಪ್ರಕಾರ ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿ ಭಾರತದ ಮೊದಲ ಡಿಜಿಟಲ್ ಜನಗಣತಿ ಕಾರ್ಯವನ್ನು ಎರಡು ಹಂತಗಳಲ್ಲಿ ನಡೆಸಿ ಗಣತಿ ಮಾಹಿತಿಯನ್ನು ಸಂಗ್ರಹಿಸುವ ಪ್ರಕ್ರಿಯೆಯು ಚಾಲ್ತಿಯಲ್ಲಿದೆ. ಈ ಪೈಕಿ ಸಾರ್ವಜನಿಕರ ಸಹಭಾಗಿತ್ವದಲ್ಲಿ ಸ್ವಯಂ ಮನೆ ಗಣತಿ ಕಾರ್ಯವನ್ನು ಮಾಡಲು ಅವಕಾಶಗಳನ್ನು ನೀಡಲಾಗಿರುತ್ತದೆ.

ಅದರಂತೆ ಕಾಯ್ದೆಯ ಪ್ರಕಾರ ತಮ್ಮ ಮಾಹಿತಿ ಹೆಸರು ಮತ್ತು ಗುರುತುಗಳ ಗೌಪ್ಯವಾಗಿ ಇರಿಸಲಾಗುತ್ತದೆ. ಹಾಗೂ ಯಾವುದೇ ತೆರಿಗೆ ಅಥವಾ ಪರಿಶೋಧನಾ ಉದ್ದೇಶಕ್ಕೆ ಸದರಿ ದತ್ತಾಂಶವನ್ನು ಬಳಸಿಕೊಳ್ಳುವುದಿಲ್ಲ.ಇದು ಸುರಕ್ಷಿತವಾಗಿ ಇರಿಸಲಾಗುತ್ತದೆ.

ಇದನ್ನೂ ಓದಿ:

ಈ ನಿಟ್ಟಿನಲ್ಲಿ ಏಪ್ರಿಲ್ 1 ರಿಂದ 15 ರವರಗೆ ನಿರ್ದೇಶನಾಲಯದಿಂದ ನೀಡಿರುವ ಸರಳವಾದ ಹಂತಗಳನ್ನು ಅನುಸರಿಸುವುದರ ಅನ್ ಲೈನ್ ನಲ್ಲಿ 15-20 ನಿಮಿಷಗಳಲ್ಲಿ ತಮ್ಮ ಮನೆಯ ಸ್ವಯಂ ಗಣತಿಯನ್ನು ಮಾಡಿಕೊಂಡು ಏಕೀಕೃತ ಸ್ವಯಂ ಗಣತಿ ಗುರುತಿನ ಸಂಖ್ಯೆಯನ್ನು (SELF ENUMERATION ID) ಪಡೆಯಬಹುದಾಗಿರುತ್ತದೆ. ಹಾಗೂ ಪರಿಶೀಲನೆಗೆ ಬರುವ ಗಣತಿದಾರರಿಗೆ ಸದರಿ ಐಡಿಯನ್ನು ಒದಗಿಸಿ ಮನೆಗಣತಿ ಕಾರ್ಯವನ್ನು ಪೂರ್ಣಗೊಳಿಸಿಕೊಳ್ಳಬಹುದಾಗಿರುತ್ತದೆ.

ತಮ್ಮ ಸ್ವಯಂ ಮನೆ ಗಣತಿಯ ಕಾರ್ಯದ ನಿಖರತೆ ಮತ್ತು ಸಂಪೂರ್ಣತೆಯನ್ನು ಖಚಿತಪಡಿಸಿಕೊಳ್ಳಲು ಗಣತಿದಾರರು ಮತ್ತು ಮೇಲ್ವಿಚಾರಕರ ಪರಿಶೀಲನೆಗೆ ಒಳಪಟ್ಟಿರುತ್ತದೆ. ಈ ಮೇರೆಗೆ ವಿಕಸಿತ ಭಾರತ @ 2047 ಅಡಿಪಾಯಕ್ಕೆ ಸಹಕರಿಸಲು ಮಂಗಳೂರು ತಾಲೂಕಿನ ಎಲ್ಲಾ ಸಾರ್ವಜನಿಕರು ತಾವೇ ಆನ್ ಲೈನ್ ಲಿಂಕ್
https://se.census.gov.in  ಮೂಲಕ ತಮ್ಮ ಮನೆಯ ಗಣತಿಯನ್ನು ಮಾಡಿಕೊಳ್ಳಲು ಮಂಗಳೂರು ತಹಸೀಲ್ದಾರ್ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ:

Vishwa News 24

Recent Posts

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು – vishwanews24

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್‌ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…

17 minutes ago

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ – vishwanews24

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ ಉಡುಪಿ: ಆಕಾಶಕಾಯದಲ್ಲಿ ದಿನವೂ ಬೆಳ್ಳಗೆ ಗೋಚರಿಸುವ ಚಂದ್ರ ಏ.1ರಂದು ಸಂಜೆ…

32 minutes ago

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ – vishwanews24

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಮಂಗಳೂರು : ಕರ್ನಾಟಕ…

44 minutes ago

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ – vishwanews24

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ…

49 minutes ago

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

21 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

21 hours ago