ಮಂಗಳೂರು: ಮಾರಣಾಂತಿಕ ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕರೆ ನೀಡಿರುವ ‘ಜನತಾ ಕರ್ಫ್ಯೂ’ಗೆ ಕರವಾಳಿಯಲ್ಲಿ ಭಾರೀ ಬೆಂಬಲ ಸಿಕ್ಕಿದೆ.
“ಜನತಾ ಕರ್ಫ್ಯೂ’ ಆಚರಿಸುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆಗೆ ದ.ಕ., ಉಡುಪಿ ಮತ್ತು ಕೊಡುಗು ಜಿಲ್ಲೆಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಹೀಗಾಗಿ, ರವಿವಾರ ದ.ಕ. ಜಿಲ್ಲೆಯಾದ್ಯಂತ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಲಿದೆ.
ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ರವಿವಾರ ಮಂಗಳೂರು ಮತ್ತು ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಯಾವುದೇ ರೀತಿಯ ಮೀನುಗಾರಿಕಾ ವ್ಯವಹಾರ ನಡೆಯುವುದಿಲ್ಲ ಎಂದು ಮೀನುಗಾರ ಮುಖಂಡರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ಹಾಗೂ ಆಟೋರಿಕ್ಷಾ ಸಂಚಾರ ನಿರ್ಧಾರದ ಬಗ್ಗೆ ಶನಿವಾರ ತೀರ್ಮಾನವಾಗಲಿದೆ. ಹಾಲು ಸೇರಿದಂತೆ ನಿತ್ಯ ಬಳಕೆಯ ವಸ್ತುಗಳು ಎಂದಿನಂತೆ ಸಿಗಲಿವೆ ಎಂದು ಮೂಲಗಳು ತಿಳಿಸಿವೆ.
ಜಗತ್ತಿನಾದ್ಯಂತ ಭೀತಿ ಹುಟ್ಟಿಸಿರುವ ಕೋವಿಡ್ 19 ವೈರಸ್ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ರವಿವಾರ ಒಂದು ದಿನದ ಜನತಾ ಕರ್ಫ್ಯೂನಲ್ಲಿ ಸರ್ವರೂ ಕೈಜೋಡಿಸಬೇಕು. ಅಂದು ಒಂದು ದಿನ ಮನೆಯಲ್ಲೇ ಉಳಿದುಕೊಳ್ಳುವಂತೆ ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಕೆ.ರಘುಪತಿ ಭಟ್ ಮನವಿ ಮಾಡಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…