ಮುಂಬಯಿ: ಹೃದಯಸ್ತಂಭನದಿಂದ ಖ್ಯಾತ ಕಿರುತೆರೆ ನಟ ರಿತುರಾಜ್ ಸಿಂಗ್(59) ನಿಧನರಾಗಿದ್ದಾರೆ.
ಮಂಗಳವಾರ(ಫೆ.20 ರಂದು) ತಡರಾತ್ರಿ ಅವರು ನಿಧನರಾಗಿದ್ದಾರೆ ಎಂದು ಅವರ ಸಹೋದ್ಯೋಗಿ ಮತ್ತು ಆತ್ಮೀಯ ಸ್ನೇಹಿತ ಅಮಿತ್ ಬೆಹ್ಲ್ ತಿಳಿಸಿದ್ದಾರೆ.
ಅವರಿಗೆ ತಡರಾತ್ರಿ 12:30ರ ವೇಳೆಗೆ ಹೃದಯಸ್ತಂಭನವಾಗಿದೆ. ಅವರು ಕಳೆದ ಕೆಲ ಸಮಯದಿಂದ ಪ್ಯಾಂಕಿಯಾಟಿಕ್ ಕಾಯಿಲೆಯಿಂದ (ಮೇದೋಜ್ಜೀರಕ ಗ್ರಂಥಿಗೆ ಸಂಬಂಧಿಸಿದ ಸಮಸ್ಯೆ) ಬಳಲುತ್ತಿದ್ದರು. ಇದಕ್ಕೆ ಅವರು ಚಿಕಿತ್ಸೆಯನ್ನು ಪಡೆಯುತ್ತಿದ್ದರು ಎಂದು ವರದಿಯಾಗಿದೆ.
ಕಿರುತೆರೆಯಲ್ಲಿ ಬಹಳ ವರ್ಷದಿಂದ ಬಣ್ಣ ಹಚ್ಚಿರುವ ಅವರು, ಇತ್ತೀಚೆಗೆ ಹಿಂದಿಯ ಜನಪ್ರಿಯ ಧಾರಾವಾಹಿ ʼಅನುಪಮಾʼದಲ್ಲಿ ಕಾಣಿಸಿಕೊಂಡಿದ್ದರು. ಟಿವಿ ಹಾಗೂ ಸಿನಿಮಾರಂಗ ಎರಡರಲ್ಲೂ ಗುರುತಿಸಿಕೊಂಡಿದ್ದ ಅವರು,’ಬನೇಗಿ ಅಪ್ನಿ ಬಾತ್’ , ‘ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ’, ‘ತ್ರಿದೇವಿಯಾನ್’, ‘ದಿಯಾ ಔರ್ ಬಾತಿ ಹಮ್’ ಮುಂತಾದ ಧಾರಾವಾಹಿ ಸೇರಿದಂತೆ ವರುಣ್ ಧವನ್ ಮತ್ತು ಆಲಿಯಾ ಭಟ್ ಜೊತೆಗೆ ‘ಹಂಪ್ಟಿ ಶರ್ಮಾ ಕಿ ದುಲ್ಹನಿಯಾ’ ಸಿನಿಮಾದಲ್ಲಿ ನಟಿಸಿದ್ದರು. ಆರ್ ಮಾಧವನ್, ದಿವಂಗತ ನಟ ಇರ್ಫಾನ್ ಮತ್ತು ಸುರೇಖಾ ಸಿಕ್ರಿ, ಇತರರೊಂದಿಗೆ ನಟಿಸಿದ್ದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…