ಜನಪ್ರಿಯ ಜಾನಪದ ಗಾಯಕಿ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಶಾರದಾ ಸಿನ್ಹಾ ನಿಧನ – vishwanews24
ಜನಪ್ರಿಯ ಜಾನಪದ ಗಾಯಕಿ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಶಾರದಾ ಸಿನ್ಹಾ ನಿಧನ..
ಪಿಎಂ ಮೋದಿ ಸೇರಿದಂತೆ ಗಣ್ಯರ ಸಂತಾಪ
ನವದೆಹಲಿ: ಜನಪ್ರಿಯ ಜಾನಪದ ಗಾಯಕಿ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಶಾರದಾ ಸಿನ್ಹಾ ಅವರು ಕ್ಯಾನ್ಸರ್‌ನಿಂದ ಮಂಗಳವಾರ ಸಂಜೆ ನಿಧನರಾಗಿದ್ದಾರೆ.
72 ವಯಸ್ಸಿನ ಖ್ಯಾತ ಗಾಯಕಿ ಶಾರದಾ ಅವನ್ನು ಅನಾರೋಗ್ಯದ ಹಿನ್ನೆಲೆ ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿತ್ತು.
ಅಕ್ಟೋಬರ್.25 ರಿಂದ ಆಸ್ಪತ್ರೆಯ ಆಂಕೊಲಾಜಿ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 2017 ರಲ್ಲಿ ಅವರಿಗೆ ಮಲ್ಟಿಪಲ್ ಮೈಲೋಮಾ ರೋಗನಿರ್ಣಯ ದೃಢಪಟ್ಟಿತ್ತು. ಇದು ಮೂಳೆ ಮಜ್ಜೆಯ ಮೇಲೆ ಪರಿಣಾಮ ಬೀರುವ ಒಂದು ರೀತಿಯ ಕ್ಯಾನ್ಸರ್. ಸಿನ್ಹಾ ಅವರನ್ನು ವೆಂಟಿಲೇಟರ್‌ನಲ್ಲಿರಿಸಲಾಗಿತ್ತು.
ಉಡುಪಿ: ಅಧಿಕ ಲಾಭಾಂಶದ ಆಮಿಷ : ಬ್ಯಾಂಕ್ ಮ್ಯಾನೇಜರ್‌ಗೆ ಆನ್‌ಲೈನ್‌ನಲ್ಲಿ ಲಕ್ಷಾಂತರ ರೂ. ವಂಚನೆ – vishwanews24
‘ಕಾರ್ತಿಕ್ ಮಾಸ್ ಇಜೋ ರಿಯಾ’, ‘ಕೋಯಲ್ ಬಿನ್’ ತರಹದ ಜನಪದ ಗೀತೆಗಳು, ‘ಗ್ಯಾಂಗ್ಸ್ ಆಫ್ ವಸೇಪುರ್’ ಹಿಂದಿ ಸಿನಿಮಾದ ‘ತಾರ್ ಬಿಜಿಲಿ’, ‘ಹಮ್ ಆಪ್ಕೆ ಹೈ ಕೌನ್’ ಚಿತ್ರದ ‘ಬಾಬುಲ್’ ಹಾಡುಗಳ ಗಾಯನದಿಂದ ಶಾರದಾ ಅವರು ಛಾಪು ಮೂಡಿಸಿದ್ದರು. ಶಾರದಾ ಅವರನ್ನು ಅಭಿಮಾನಿಗಳು ‘ಬಿಹಾರಿ ಕೋಕಿಲಾ’ ಎಂದು ಕರೆಯುತ್ತಿದ್ದರು.
सुप्रसिद्ध लोक गायिका शारदा सिन्हा जी के निधन से अत्यंत दुख हुआ है। उनके गाए मैथिली और भोजपुरी के लोकगीत पिछले कई दशकों से बेहद लोकप्रिय रहे हैं। आस्था के महापर्व छठ से जुड़े उनके सुमधुर गीतों की गूंज भी सदैव बनी रहेगी। उनका जाना संगीत जगत के लिए एक अपूरणीय क्षति है। शोक की इस… pic.twitter.com/sOaLvUOnrW
— Narendra Modi (@narendramodi) November 5, 2024
ಶಾರದಾ ಅವರು ಭೋಜಪುರಿ, ಮೈಥಿಲಿ ಭಾಷೆಯ ಜನಪದ ಗೀತೆಗಳನ್ನು ಹಾಡುತ್ತಿದ್ದರು. ಶಾರದಾ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ‘ಪ್ರಸಿದ್ಧ ಜಾನಪದ ಗಾಯಕಿ ಶಾರದಾ ಸಿನ್ಹಾ ಜೀ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರ ಮೈಥಿಲಿ ಮತ್ತು ಭೋಜ್‌ಪುರಿ ಜಾನಪದ ಹಾಡುಗಳು ಹಲವು ದಶಕಗಳಿಂದ ಜನಪ್ರಿಯವಾಗಿವೆ. ಅವರ ನಿಧನ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳೊಂದಿಗೆ ನನ್ನ ಸಂತಾಪಗಳು’ ಎಂದು ಪ್ರಧಾನಿ ಮೋದಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಉಡುಪಿ: ಅಪ್ರಾಪ್ತ ಬಾಲಕಿಗೆ ಪ್ರೀತಿಸಿ ಮೋಸ ಮಾಡಿದ ಪ್ರಕರಣ: ಆರೋಪಿಗೆ 20 ವರ್ಷ ಜೈಲು – vishwanews24
