Featured

ಜನಪ್ರಿಯ ಜಾನಪದ ಗಾಯಕಿ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಶಾರದಾ ಸಿನ್ಹಾ ನಿಧನ – vishwanews24

ಜನಪ್ರಿಯ ಜಾನಪದ ಗಾಯಕಿ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಶಾರದಾ ಸಿನ್ಹಾ ನಿಧನ..

ಪಿಎಂ ಮೋದಿ ಸೇರಿದಂತೆ ಗಣ್ಯರ ಸಂತಾಪ

ನವದೆಹಲಿ: ಜನಪ್ರಿಯ ಜಾನಪದ ಗಾಯಕಿ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಶಾರದಾ ಸಿನ್ಹಾ ಅವರು ಕ್ಯಾನ್ಸರ್‌ನಿಂದ ಮಂಗಳವಾರ ಸಂಜೆ ನಿಧನರಾಗಿದ್ದಾರೆ.

72 ವಯಸ್ಸಿನ ಖ್ಯಾತ ಗಾಯಕಿ ಶಾರದಾ ಅವನ್ನು ಅನಾರೋಗ್ಯದ ಹಿನ್ನೆಲೆ ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿತ್ತು.

ಅಕ್ಟೋಬರ್.25 ರಿಂದ ಆಸ್ಪತ್ರೆಯ ಆಂಕೊಲಾಜಿ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 2017 ರಲ್ಲಿ ಅವರಿಗೆ ಮಲ್ಟಿಪಲ್ ಮೈಲೋಮಾ ರೋಗನಿರ್ಣಯ ದೃಢಪಟ್ಟಿತ್ತು. ಇದು ಮೂಳೆ ಮಜ್ಜೆಯ ಮೇಲೆ ಪರಿಣಾಮ ಬೀರುವ ಒಂದು ರೀತಿಯ ಕ್ಯಾನ್ಸರ್. ಸಿನ್ಹಾ ಅವರನ್ನು ವೆಂಟಿಲೇಟರ್‌ನಲ್ಲಿರಿಸಲಾಗಿತ್ತು.

‘ಕಾರ್ತಿಕ್ ಮಾಸ್ ಇಜೋ ರಿಯಾ’, ‘ಕೋಯಲ್ ಬಿನ್’ ತರಹದ ಜನಪದ ಗೀತೆಗಳು, ‘ಗ್ಯಾಂಗ್ಸ್‌ ಆಫ್ ವಸೇಪುರ್’ ಹಿಂದಿ ಸಿನಿಮಾದ ‘ತಾರ್‌ ಬಿಜಿಲಿ’, ‘ಹಮ್‌ ಆಪ್ಕೆ ಹೈ ಕೌನ್’ ಚಿತ್ರದ ‘ಬಾಬುಲ್’ ಹಾಡುಗಳ ಗಾಯನದಿಂದ ಶಾರದಾ ಅವರು ಛಾಪು ಮೂಡಿಸಿದ್ದರು. ಶಾರದಾ ಅವರನ್ನು ಅಭಿಮಾನಿಗಳು ‘ಬಿಹಾರಿ ಕೋಕಿಲಾ’ ಎಂದು ಕರೆಯುತ್ತಿದ್ದರು.

ಶಾರದಾ ಅವರು ಭೋಜಪುರಿ, ಮೈಥಿಲಿ ಭಾಷೆಯ ಜನಪದ ಗೀತೆಗಳನ್ನು ಹಾಡುತ್ತಿದ್ದರು. ಶಾರದಾ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ‘ಪ್ರಸಿದ್ಧ ಜಾನಪದ ಗಾಯಕಿ ಶಾರದಾ ಸಿನ್ಹಾ ಜೀ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರ ಮೈಥಿಲಿ ಮತ್ತು ಭೋಜ್‌ಪುರಿ ಜಾನಪದ ಹಾಡುಗಳು ಹಲವು ದಶಕಗಳಿಂದ ಜನಪ್ರಿಯವಾಗಿವೆ. ಅವರ ನಿಧನ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳೊಂದಿಗೆ ನನ್ನ ಸಂತಾಪಗಳು’ ಎಂದು ಪ್ರಧಾನಿ ಮೋದಿ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago