ಜನರನ್ನು ಲೂಟಿ ಮಾಡಲು ಹೊರಟಿರುವುದೇ ಮೋದಿ ಸರಕಾರ ಎರಡನೇ ಅವಧಿಯ ಸಾಧನೆ : ರಮನಾಥ್‌ ರೈ -Vishwanews24

ಮಂಗಳೂರು : ಕೇಂದ್ರ ಸರ್ಕಾರ ಭಾವನಾತ್ಮಕವಾಗಿ ಜನರನ್ನು ವಂಚನೆ ಮಾಡ ಹೊರಟ್ಟಿದ್ದು, ಸರ್ಕಾರಿ ಸ್ವಾಮ್ಯ ಸಂಸ್ಥೆಗಳನ್ನು ಖಾಸಗೀಕರಣ ಮಾಡಲು ಮುಂದಾಗಿದ್ದಾರೆ. ಜನರನ್ನು ಲೂಟಿ ಮಾಡಲು ಹೊರಟಿರುವುದೇ ಮೋದಿ ಸರಕಾರ ಎರಡನೇ ಅವಧಿಯ ಸಾಧನೆ ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ರಮನಾಥ್‌ ರೈ ಕೇಂದ್ರ ಸರ್ಕಾರದ ವಿರುದ್ದ ಕಿಡಿ ಕಾರಿದ್ದಾರೆ.

 

ಈ ಬಗ್ಗೆ ನಗರದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರವು ವಿಮಾನ ನಿಲ್ದಾಣ, ಕಲ್ಲಿದ್ದಲು ನಿಗಮಗಳು, ಬಿಎಸ್ಎನ್ಎಲ್ ಇನ್ನಿತರ ಕಂಪನಿಗಳನ್ನು ಖಾಸಗೀಕರಣ ಮಾಡಲು ಮುಂದಾಗಿದೆ. ಮೆಸ್ಕಾಂ ಖಾಸಗೀಕರಣ ಮಾಡಲು ಹೊರಟಿರುವುದು ಸರಕಾರ ಸಾಧನೆಯೇ..? ಎಂದು ಪ್ರಶ್ನಿಸಿದರು.

ಖಾಸಗಿ ಕಂಪನಿಯನ್ನು ಬದುಕಿಸಲು ಸರಕಾರಿ ಕಂಪನಿ ಮುಚ್ಚಲು ಕೇಂದ್ರ ಸರ್ಕಾರ ಮುಂದಾಗಿದ್ದು ಜಿಯೋ ಕಂಪನಿಯನ್ನು ಬ್ರ್ಯಾಂಡ್ ಅಂಬಾಸಿಡರ್ ಮಾಡಲು ಮೋದಿ ಹೊರಟಿದ್ದಾರೆ ಎಂದು ದೂರಿದ ಅವರು ಸರ್ಕಾರವು ಭಾವನಾತ್ಮಕವಾಗಿ ಜನರನ್ನು ವಂಚಿಸಲು ಹೊರಟಿದ್ದು ಸ್ವಾತಂತ್ರ್ಯ ಹೋರಾಟಗಾರರ ಹೆಸರಿನ ಮೂಲಕ ನೆಹರೂ ಕುಟುಂಬದ ಟಾರ್ಗೆಟ್ ಮಾಡುತ್ತಿದೆ ಎಂದು ಆರೋಪಿಸಿದರು.

ಮೋದಿಗೆ ಎರಡನೇ ಅವಧಿಯಲ್ಲೂ ಕಪ್ಪು ಹಣ ಹೊರತರಲು ಆಗಿಲ್ಲ. ಬದಲಾಗಿ ಗ್ಯಾಸ್, ಪೆಟ್ರೋಲಿಯಂನಲ್ಲಿ ಲೂಟಿ ಮಾಡಲು ಸರ್ಕಾರ ಮುಂದಾಗಿದೆ. ಮೋದಿ ಸರಕಾರ ಎರಡನೇ ಅವಧಿಯ ಸಾಧನೆ ಇದೇನಾ..? ಎಂದು ಮಾಜಿ ಸಚಿವ ರಮಾನಾಥ ರೈ ಪ್ರಶ್ನಿಸಿದರು.

 

Vishwa News 24

Recent Posts

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ – vishwanews24

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…

23 hours ago

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – vishwanews24

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…

24 hours ago

ಮಂಗಳೂರು: ಗಾಯಗೊಂಡ ತಾಯಿ, ಮಗುವನ್ನು ಆಸ್ಪತ್ರೆಗೆ ಸಾಗಿಸಿದ ಬಸ್ ಸಿಬ್ಬಂದಿ; ಮಾನವೀಯತೆಗೆ ಶ್ಲಾಘನೆ – vishwanews24

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…

1 day ago

ಮಂಗಳೂರು – ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ – vishwanews24

ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…

1 day ago

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ – vishwanews24

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…

1 day ago

ಯುವಕ ನಾಪತ್ತೆ : ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – vishwanews24

ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…

1 day ago