ಮೈಸೂರು: ಜನರಲ್ಲಿ ಆತ್ಮವಿಶ್ವಾಸ ತುಂಬಲು ಪೊಲೀಸರಿಗೆ ಹೃದಯವಂತಿಕೆ ಬೇಕೇ ಹೊರತು ಕಠಿಣ ನಿರ್ಧಾರಗಳಲ್ಲ ಎಂದು ಗೃಹ ಸಚಿವ ಅರಗ ಜ್ಞಾನೆಂದ್ರ ಮಂಗಳವಾರ ತಿಳಿಸಿದರು.
ಪೊಲೀಸ್ ತರಬೇತಿ ಶಾಲೆ ಜ್ಯೋತಿ ನಗರ ಇಲ್ಲಿ 6ನೇ ತಂಡದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಪ್ರಶಿಕ್ಷಣಾರ್ಥಿಗಳ ಆಕರ್ಷಕ ನಿರ್ಗಮನ ಪಥ ಸಂಚಲನದಲ್ಲಿ ಪಾಲ್ಗೊಂಡು ಗೌರವ ವಂದನೆ ಸ್ವೀಕರಿಸಿ, ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು.
‘ಮಹಿಳೆ ಅಬಲೆ ಅಂತ ಹೇಳಿದರು, ಯಾಕಾಗಿ ಹೇಳಿದರು ಅಂತ ಈ ಪರೇಡ್ ಸಂದರ್ಭದಲ್ಲಿ ಪ್ರಶ್ನಾರ್ಥಕ ಚಿಹ್ನೆ ನನ್ನಲ್ಲಿ ಮೂಡಿತು. ನಾನು ಅಬಲೆಯಲ್ಲ, ಸಬಲೆ ನನ್ನನ್ನು ನಾನು ರಕ್ಷಣೆ ಮಾಡಿಕೊಂಡು ಸಮಾಜವನ್ನು, ಸಮುದಾಯವನ್ನು ರಕ್ಷಣೆ ಮಾಡುವ ಯೋಗ್ಯತೆ ಪಡೆದಿದ್ದೇನೆಂದು ಎದೆ ತಟ್ಟಿ ಹೇಳುವ ವಾತಾವರಣ ಈ ಪರೇಡ್ ಮೈದಾನದಲ್ಲಿ ಕಂಡು ಬಂತು’ ಎಂದು ಅವರು ಹೇಳಿದರು.
‘ವೈರಿ ರಾಷ್ಟ್ರಗಳಿಂದ ಬರುವ ಶತ್ರುಗಳನ್ನು ದಮನ ಮಾಡಲು ನಮ್ಮ ಸೇನಾ ಪಡೆ ಸನ್ನದ್ಧವಾಗಿದೆ. ಆದರೆ ವಿವಿಧ ಧರ್ಮ, ಮತ, ಪಂಥ ಭಾಷೆ ಇವೆಲ್ಲವೂ ಇರುವ ದೇಶದ ಆಂತರಿಕ ರಕ್ಷಣೆಯನ್ನು ಪೊಲೀಸರು ಮಾಡಬೇಕು. ಪೊಲೀಸರು ದೇಶದ ಆಂತರಿಕ ಭದ್ರತೆಯನ್ನು ಗಟ್ಟಿಗೊಳಿಸಿ ನಾಗರಿಕರ ಮಾನ, ಪ್ರಾಣ, ಸ್ವತ್ತು ಕಾಪಾಡುವ ಬಹಳ ದೊಡ್ಡ ಹೊಣೆಗಾರಿಕೆ ನಿರ್ವಹಿಸುತ್ತಿದ್ದಾರೆ’ ಎಂದು ಸಚಿವರು ಶ್ಲಾಘಿಸಿದರು.
‘ಪೊಲೀಸರು ಅಂದ ತಕ್ಷಣ ಪುರುಷರು ಅನ್ನುವ ಪರಿಕಲ್ಪನೆ ನಿರ್ಮಾಣವಾಗುತ್ತಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಸರ್ಕಾರ ಮಹಿಳಾ ಸಿಬ್ಬಂದಿಯನ್ನು ಪೊಲೀಸ್ ಪಡೆಯಲ್ಲಿ ನೇಮಕ ಮಾಡಿಕೊಳ್ಳುವ ಪಾಲಿಸಿ ತಂದಿದೆ. ಶೇ 25 ಪಾಲು ಮಹಿಳೆಯರು ಪೊಲೀಸ್ ಪಡೆಯಲ್ಲಿ ಇರಬೇಕು. ರಾಜ್ಯದಲ್ಲಿ ಶೇ 10ರಷ್ಟು ಮಹಿಳಾ ಪೊಲೀಸ್ ಸಿಬ್ಬಂದಿ ಇದ್ದಾರೆ. ಕ್ರಮೇಣ ಇದನ್ನು ಶೇ 25ಕ್ಕೆ ಹೆಚ್ಚಿಸುವ ಕೆಲಸ ನಡೆಯುತ್ತಿದೆ’ ಎಂದರು.
ಇದನ್ನೂ ಓದಿ : ಅ.11 ರವರೆಗೆ ರಾಜ್ಯಾದ್ಯಂತ ‘ನೈಟ್ ಕರ್ಪ್ಯೂ’ ವಿಸ್ತರಿಸಿ : ರಾಜ್ಯ ಸರ್ಕಾರ ಆದೇಶ -Vishwanews24
ಜನರ ಮನಸ್ಸಿನಲ್ಲಿ ಪೊಲೀಸ್ ಎಂದರೆ ಭಯ ಇರಬಾರದು. ಸಾಮಾನ್ಯ ಜನರಿಗೆ ಪೊಲೀಸ್ ಎಂದರೆ ನಮ್ಮ ರಕ್ಷಕರು ಸ್ನೇಹಿತರು ಎನ್ನುವ ಭಾವನೆ ಇರಬೇಕು. ಅಪರಾಧಿಗಳಿಗೆ, ದರೋಡೆಕೋರರಿಗೆ, ಕಳ್ಳರಿಗೆ ಭಯ ಇರಬೇಕೇ ಹೊರತು ಸಾಮಾನ್ಯರಿಗಲ್ಲ. ಠಾಣೆಗೆ ಬಂದ ಸಾಮಾನ್ಯ ಜನರನ್ನು ಗೌರವಿಸಬೇಕು. ಸಾಮಾನ್ಯ ನಾಗರಿಕ ಸ್ನೇಹಿಯಾಗಿ ನಡೆದುಕೊಳ್ಳಬೇಕು. ಸಾಮಾನ್ಯರಿಂದ ಇಂತಹ ಅಪೇಕ್ಷೆ ಇದೆ ಎಂದು ಸಚಿವರು ತಿಳಿಸಿದರು.
ಇದನ್ನೂ ಓದಿ : ಸುರತ್ಕಲ್: ಒಟ್ಟಿಗೆ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಿಂದೂ ಕಾರ್ಯಕರ್ತರಿಂದ ಹಲ್ಲೆ ; ಐವರ ಬಂಧನ -Vishwanews24
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…