Featured

ಜನರಲ್ಲಿ ಭರವಸೆ ಮೂಡಿಸಲು ವ್ಯಾಕ್ಸಿನ್ ಹಾಕಿಸ್ಕೊಂಡ ಉಡುಪಿ‌ ಡಿಸಿ-vishwanews24

ಜನರಲ್ಲಿ ಭರವಸೆ ಮೂಡಿಸಲು ವ್ಯಾಕ್ಸಿನ್ ಹಾಕಿಸ್ಕೊಂಡ ಉಡುಪಿ‌ ಡಿಸಿ

ಉಡುಪಿ: ಕೊರೋನಾ ಸಾಂಕ್ರಾಮಿಕ ವಿರುದ್ಧ ಹೋರಾಡಿದ ಫ್ರಂಟ್ ಲೈನ್ ವರ್ಕರ್ಸ್ ಗೆ ಉಡುಪಿ ಜಿಲ್ಲೆಯಲ್ಲಿ ವ್ಯಾಕ್ಸಿನೇಷನ್ ಆರಂಭವಾಗಿದೆ. ಜಿಲ್ಲಾಧಿಕಾರಿ ಜಿ. ಜಗದೀಶ್ ಕೋವಿಶೀಲ್ಡ್ ಇಂಜೆಕ್ಷನ್ ಚುಚ್ಚಿಸಿಕೊಂಡರು. ಅಜ್ಜರಕಾಡು ಜಿಲ್ಲಾವಸರಕಾರಿ ಆಸ್ಪತ್ರೆಯ ವ್ಯಾಕ್ಸಿನೇಶನ್ ಕೊಠಡಿಯಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ಕೊಡಲಾಯ್ತು. ಜಿಲ್ಲಾಧಿಕಾರಿಗಳ ಜೊತೆ ಜಿಲ್ಲಾ ಪಂಚಾಯತ್ ಸಿಇಓ ಡಾ. ನವೀನ್ ಭಟ್, ಎ ಎಸ್ ಪಿ ಕುಮಾರ ಚಂದ್ರ, ತಹಶೀಲ್ದಾರ್ ಪ್ರದೀಪ್ ಕುರುಡೇಕರ್, ನಗರಸಭೆ ಕಮಿಷನರ್ ಉದಯಕುಮಾರ್ ಶೆಟ್ಟಿ ,ಕೂಡಾ ಲಸಿಕೆ ಹಾಕಿಸಿಕೊಂಡರು.

ತಾಲೂಕಿನಲ್ಲಿ ತಾಸಿಲ್ದಾರರು, ಇಒಗಳು ವ್ಯಾಕ್ಸಿನೇಷನ್ ಪಡೆದುಕೊಳ್ಳಲಿದ್ದಾರೆ. ಮೂರು ದಿನದಲ್ಲಿ 4040 ಜನರಿಗೆ ಲಸಿಕೆ ಹಾಕಲಾಗುತ್ತದೆ. ಮೊದಲ ದಿನ 593 ಜನಕ್ಕೆ ಲಸಿಕೆ ಹಾಕಲಾಗುತ್ತದೆ. ನಾವು ಮೊದಲು ತೆಗೆದುಕೊಂಡು ಕೊರೋನಾ ರಿಸ್ಕ್ ಕಡಿಮೆ ಮಾಡಬೇಕು. ಅಧಿಕಾರಿ ವರ್ಗ ಆರೋಗ್ಯವಾಗಿದ್ದು ರೋಗದ ವಿರುದ್ಧದ ಹೋರಾಟಕ್ಕೆ ಸಿದ್ಧವಾಗಿರಬೇಕು ಎಂಬ ಹಿನ್ನೆಲೆಯಲ್ಲಿ ನಾವೇ ಲಸಿಕೆ ಹಾಕಿಸಿಕೊಂಡಿದ್ದೇವೆ. ಇಂಜೆಕ್ಷನ್ ತೆಗೆದಕೊಂಡ ಮೇಲೆ ಯಾವುದೇ ವ್ಯತ್ಯಾಸ ಆಗಿಲ್ಲ. ಯಾರೂ ಲಸಿಕೆ ಪಡೆಯಲು ಹಿಂಜರಿಯೋದು ಬೇಡ. ಕೊರೋನಾದ ರಿಸ್ಕ್ ಗೆ ಹೋಲಿಸಿದ್ರೆ ಪಾಯಿಂಟ್ 1 % ರಿಸ್ಕ್ ಇಲ್ಲ ಎಂದು ಡಿಸಿ ಜಿ. ಜಗದೀಶ್ ಹೇಳಿದರು.

ಕೊರೋನಾ ಬಂದವರಿಗೆ , ಅವರ ಕುಟುಂಬಕ್ಕೆ ಲಸಿಕೆಯ ಬೆಲೆ ಗೊತ್ತಿರುತ್ತದೆ. ಕೋರೋನಾ ನಿವಾರಣೆಯಾಗಿದೆ ಎಂಬ ಮನೋಭಾವನೆಯಲ್ಲಿ ಜನ ಇದ್ದಾರೆ. ಆದರೆ ಕೊರೋನ ರೂಪಾಂತರ ಆಗುವ ಸಾಧ್ಯತೆ. ಇದೇ ಎಚ್ಚರಿಕೆ ಗೋಸ್ಕರ ಲಸಿಕೆಯನ್ನು ಪಡೆದುಕೊಳ್ಳಲೇಬೇಕು. ಸರ್ಕಾರದಿಂದ ಉಚಿತ ಲಸಿಕೆ ಸಿಕ್ಕಿರುವುದು ನಮ್ಮ ಅದೃಷ್ಟ ಎಂದು ಸಿಇಒ ಡಾ. ನವೀನ್ ಭಟ್ ಹೇಳಿದರು.

ಕೊರೊನಾ ಲಸಿಕೆ ತೆಗೆದುಕೊಳ್ಳಲು ಯಾರು ಹಿಂಜರಿಯುವ ಅವಶ್ಯಕತೆ ಇಲ್ಲ. ಕೊರೋನಾ ಸಾಂಕ್ರಾಮಿಕ ದ ವಿರುದ್ಧ ಹೋರಾಡುವ ಫ್ರಂಟ್ ಲೈನ್ ವರ್ಕರ್ಸ್ ಎಲ್ಲರೂ ಆತಂಕವಿಲ್ಲದೆ ಲಸಿಕೆ ತೆಗೆದುಕೊಳ್ಳಿ ಎಂದು ಎಎಸ್ ಪಿ ಕುಮಾರ ಚಂದ್ರ ಕರೆಕೊಟ್ಟರು.

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

7 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

7 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

8 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

8 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

12 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

12 hours ago